ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12ನೇ ತರಗತಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Last Updated 28 ಜನವರಿ 2023, 19:40 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 12ನೇ ತರಗತಿ ವಿದ್ಯಾರ್ಥಿಗಳಿಗೆ ದಯಾನಂದ ಸಾಗರ್ ವಿಶ್ವವಿದ್ಯಾಲಯವು ಯಶಸ್ವಿಯಾಗಿ ಪರೀಕ್ಷೆ ಎದುರಿಸುವ ಬಗ್ಗೆ ಫೆ.2ರಿಂದ ಫೆ.9ರವರೆಗೆ ‘ಮೈಂಡ್ ಸ್ಪಾರ್ಕ್ ಸೀರೀಸ್’ ಶೀರ್ಷಿಕೆಯಡಿ ಕಾರ್ಯಾಗಾರ ಹಮ್ಮಿಕೊಂಡಿದೆ.

ಎಂಟು ದಿನಗಳ ಈ ಕಾರ್ಯಾಗಾರದಲ್ಲಿ ಉಚಿತ ಪ್ರವೇಶ ಇರಲಿದೆ. ಮಂಡಳಿಯ ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳನ್ನು ವಿಷಯ ತಜ್ಞರು ತಿಳಿಸಿಕೊಡಲಿದ್ದಾರೆ. ಸಿಬಿಎಸ್‌ಇ ಪರೀಕ್ಷೆಯಲ್ಲಿ ವಿಶ್ವವಿದ್ಯಾಲಯವು ಸತತವಾಗಿ ರಾಜ್ಯದ ಅಗ್ರ ಮೂರು ವಿಶ್ವ ವಿದ್ಯಾಲಯಗಳಲ್ಲಿ ಸ್ಥಾನ ಪಡೆಯುತ್ತಿದೆ. ಉತ್ತಮವಾಗಿ ಅಂಕ ಪಡೆಯಲು ಕಾರ್ಯಾ
ಗಾರದಲ್ಲಿ ವಿಷಯ ತಜ್ಞರು ಸಲಹೆ ಸೂಚನೆಗಳನ್ನೂ ನೀಡಲಿದ್ದಾರೆ.

ಪ್ರತಿನಿತ್ಯ ನಾಲ್ಕು ಗಂಟೆಗಳ ಕಾಲ ಈ ಕಾರ್ಯಾಗಾರ ನಡೆಯಲಿದೆ. ವಿದ್ಯಾರ್ಥಿಗಳು https://dsuedu.in/CBSE-STUDENT ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಶಾಲೆಗಳು https://dsuedu.in/CBSE-COLLEGE ಮೂಲಕ ನೋಂದಾಯಿಸಿ, ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT