ಯಾದಗಿರಿ: ‘ವಿದ್ಯಾರ್ಥಿಗಳು ಸರ್ಕಾರಿ ನೌಕರಿ ಸಿಗುವ ಕೋರ್ಸ್ಗಳು ಮಾತ್ರವಲ್ಲದೆ ಸ್ವಯಂ ಉದ್ಯೋಗ ಸ್ಥಾಪಿಸಿ ಇತರರಿಗೆ ನೌಕರಿ ಕೊಡುವಂತಹ ವೃತ್ತಿಪರ ಕೋರ್ಸ್ಗಳನ್ನೂ ಓದಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ಹೇಳಿದರು.

ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಇಲಾಖೆ, ಡಯಟ್, ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಸ್ತುತ ದಿನಗಳಲ್ಲಿ ಡಾಕ್ಟರ್, ಎಂಜಿನಿಯರ್ ಇಲ್ಲವೆ ಯಾವುದಾದರು ಸರ್ಕಾರಿ ನೌಕರಿ ಪಡೆಯುವ ಇಚ್ಛೆಯಿಂದ ಓದುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಹೊರತುಪಡಿಸಿ ವಿವಿಧ ಕೌಶಲಾಭಿವೃದ್ಧಿ ವೃತ್ತಿಪರ ಕೋರ್ಸ್ಗಳನ್ನು ಮುಗಿಸಿ ಅದರಿಂದ ನಿಮ್ಮದೆಯಾದ ಉದ್ಯೋಗ ಮಾಡಬಹುದು’ ಎಂದು ಸಲಹೆ ನೀಡಿದರು.

ಡಿಡಿಪಿಐ ಚನ್ನಬಸಪ್ಪ ಮುಧೋಳ ಮಾತನಾಡಿ, ‘ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ಹಾಗೂ ಹೆಚ್ಚಿನ ಅವಕಾಶ ಕಲ್ಪಿಸಲು ಪ್ರೌಢಶಾಲೆ ಹಾಗೂ ಪದವಿಪೂರ್ವ ಹಂತದ ಮಕ್ಕಳಿಗೆ ಮುಂದಿನ ಶಿಕ್ಷಣ, ವಿದ್ಯಾರ್ಥಿ ವೇತನ ಮತ್ತು ಉದ್ಯೋಗ ಅವಕಾಶಗಳ ಸಮಗ್ರ ಮಾಹಿತಿ ಮತ್ತು ಮಾರ್ಗದರ್ಶನವನ್ನು ಈ ಮೇಳದಲ್ಲಿ ನೀಡಲಾಗುವುದು’ ಎಂದರು.

‘ಮಕ್ಕಳು ತಮ್ಮ ಮುಂದಿನ ಶಿಕ್ಷಣದ ಆಯ್ಕೆ ಮಾಡಿಕೊಂಡು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು. ಪೋಷಕರು ಮಕ್ಕಳ ಅಭಿರುಚಿಗೆ ತಕ್ಕಂತಹ ಓದಿಗೆ ಪ್ರೋತ್ಸಾಹ ನೀಡಬೇಕು’ ಎಂದು ಹೇಳಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕ ವೃಷಭೇಂದ್ರಯ್ಯ ಜಿ.ಎಂ. ಮಾತನಾಡಿ, ‘ಜಿಲ್ಲಾ ಕೇಂದ್ರದಲ್ಲಿ ವೃತ್ತಿ ಜೀವನ ವಿಭಾಗ ಸ್ಥಾಪಿಸಲಾಗುತ್ತಿದ್ದು, ಎಲ್ಲ ತರಹದ ಮೇಳಗಳು ಪ್ರತಿ ತಾಲ್ಲೂಕುಗಳಲ್ಲಿ ಆಯೋಜಿಸಲಾಗುವುದು’ ಎಂದರು.

ಸರ್ಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಅನಿಲಕುಮಾರ ಜಿಂದೆ, ಎಸ್ಆರ್ಟಿಟಿ ಕಂಪನಿಯ ಮಹೇಶ ಅವರು ವೃತ್ತಿ ಶಿಕ್ಷಣ ಮತ್ತು ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಸ್ಕೌಟ್ ಮತ್ತು ಗೈಡ್ಸ್ನ 15 ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಮೇಳದಲ್ಲಿ 12 ವೃತ್ತಿಪರ ಕಾಲೇಜು ಮತ್ತು ಸಂಸ್ಥೆಗಳು ಭಾಗವಹಿಸಿದ್ದವು.

ಕಾರ್ಯಕ್ರಮದಲ್ಲಿ ‘ಯುಡಾ’ ಅಧ್ಯಕ್ಷ ಬಾಬುರಾವ ಕಾಡ್ಲೂರ್, ಡಿಡಿಪಿಯು ಪಂಡಿತರಾವ, ಬಿಇಒ ಈರಪ್ಪ ಕನ್ನಳ್ಳಿ, ಶಾಲಾ ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಪೂಜಾರಿ, ಪ್ರಮುಖರಾದ ಅಶೋಕಕುಮಾರ ಕೆಂಭಾವಿ, ರಾಘವೇಂದ್ರ ಅಳ್ಳೋಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಡಯಟ್ ಉಪನ್ಯಾಸಕಿ ಅನ್ನಪೂರ್ಣ ನಿರೂಪಿಸಿ, ಉಪನ್ಯಾಸಕ ಶರಣಗೌಡ ಪಾಟೀಲ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-30-2009329905

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.