ಯಾದಗಿರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ–1, 2ಎ, 2ಬಿ, 3ಎ, 3ಬಿ, ಎಸ್ಸಿ, ಎಸ್ಟಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ.ಆದಾಯ ಮಿತಿ ಪ್ರವರ್ಗ-1, ಎಸ್ಸಿ, ಎಸ್ಟಿ, ₹ 2.50 ಲಕ್ಷ ಒಳಗಿರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ ₹1 ಲಕ್ಷ ಒಳಗಿರಬೇಕು. ಇಲಾಖೆಯ ವೆಬ್ಸೈಟ್ shp.karnataka.gov.in/bcwdನಲ್ಲಿ ಜೂನ್ 8ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ವೆಬ್ಸೈಟ್ bcwd.karnataka.gov.inಗೆ ಭೇಟಿ ನೀಡಬೇಕು. ಅರ್ಜಿಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.comಗೆ ಇ-ಮೇಲ್ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8050770004ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-30-1125285699

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.