ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ಪೊಲೀಸ್‌ ಆಗಲು ತಯಾರಿ ಏನು?

Published 26 ನವೆಂಬರ್ 2023, 23:30 IST
Last Updated 26 ನವೆಂಬರ್ 2023, 23:30 IST
ಅಕ್ಷರ ಗಾತ್ರ

1. ಸರ್, ಡಿಪ್ಲೊಮಾ (ಪತ್ರಿಕೋದ್ಯಮ) ಮತ್ತು ಬಿ.ಎಸ್‌ಡಬ್ಲ್ಯೂ ಪದವಿ ಗಳಿಸಿದವರಿಗೆ ಮುಂದಿನ ಅವಕಾಶಗಳೇನು?

ಹೆಸರು, ಊರು ತಿಳಿಸಿಲ್ಲ.

ಪತ್ರಿಕೋದ್ಯಮ ಡಿಪ್ಲೊಮಾ ನಂತರ, ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ರೂಪಿಸಿಕೊಳ್ಳಲು ವೃತ್ತಿ ಸಂಬಂಧಿತ ಕೌಶಲಗಳಾದ ಸಂವಹನ (ಓದುವಿಕೆ, ಬರವಣಿಗೆ, ಮಾತುಗಾರಿಕೆ, ನಿರೂಪಣೆ ಇತ್ಯಾದಿ), ಭಾಷಾ ಪರಿಣತಿ, ವಿಶ್ಲೇಷಾತ್ಮಕ ಕೌಶಲ, ದಿಟ್ಟತನ, ಸಮಯದ ನಿರ್ವಹಣೆ ಇತ್ಯಾದಿಗಳನ್ನೂ ಬೆಳೆಸಿಕೊಳ್ಳಬೇಕು. ಯಾವುದೇ ವಿಚಾರವನ್ನು ಒಪ್ಪಿಕೊಳ್ಳುವ ಮುನ್ನ ತನಿಖೆ ಅಥವಾ ಪರಿಶೋಧನೆ ಮಾಡುವ ಮನಸ್ಥಿತಿ ಇರಬೇಕು. ಹಾಗೂ, ಪ್ರಾಮಾಣಿಕತೆ, ನಿಷ್ಠೆ, ಬದ್ದತೆಯನ್ನು  ವ್ಯಕ್ತಿತ್ವದಲ್ಲಿ ಮೈಗೂಡಿಸಿಕೊಳ್ಳಬೇಕು.   ವಿಸ್ತಾರವಾದ ಈ ಕ್ಷೇತ್ರದಲ್ಲಿ ಮುದ್ರಣ ಮಾಧ್ಯಮ (ದಿನ ಪತ್ರಿಕೆಗಳು, ನಿಯತಕಾಲಿಕೆಗಳು ಇತ್ಯಾದಿ), ಟೆಲಿವಿಷನ್, ರೇಡಿಯೊ, ಸಾಮಾಜಿಕ ಮಾಧ್ಯಮ, ವೆಬ್‌ಸೈಟ್ಸ್, ಬ್ಲಾಗ್ಸ್, ವಿಡಿಯೊ, ಪಾಡ್‌ಕಾಸ್ಟ್ ಇತ್ಯಾದಿ ವಲಯಗಳಲ್ಲಿದ್ದು,   ಆಸಕ್ತಿ, ಅಭಿರುಚಿಯಂತೆ ಆಯ್ಕೆಯನ್ನು ಮಾಡಿಕೊಳ್ಳಬಹುದು.

ಸಂಸ್ಥೆಗಳ ಕಾರ್ಯಾಚರಣೆಯಲ್ಲಿ ಮಾನವ ಸಂಪನ್ಮೂಲದ ನಿರ್ವಹಣೆ ಹೆಚ್ಚಿನ ಪ್ರಾಮುಖ್ಯ  ಪಡೆದಿದೆ. ಹಾಗಾಗಿ, ಬಿ.ಎಸ್‌ಡಬ್ಲ್ಯೂ ಪದವೀಧರರಿಗೆ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಮಾನವ ಸಂಪನ್ಮೂಲದ ಅಭಿವೃದ್ಧಿ ಮತ್ತು ನಿರ್ವಹಣೆ, ಕಾರ್ಮಿಕ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ, ಸಮುದಾಯದ ಅಭಿವೃದ್ಧಿ ಇತ್ಯಾದಿ ವಲಯಗಳಲ್ಲಿ ವ್ಯಾಪಕ  ಉದ್ಯೊಗಾವಕಾಶಗಳಿವೆ.

ಎರಡೂ ಕೋರ್ಸ್ ಆಯ್ಕೆಗಳನ್ನು ಮಾಡಿದರೆ, ಮಾಧ್ಯಮ ಕ್ಷೇತ್ರದ ಮಾನವ ಸಂಪನ್ಮೂಲ ವಿಭಾಗದಲ್ಲಿ ವೃತ್ತಿಯನ್ನು ಅರಸಬಹುದು. ಆದ್ದರಿಂದ, ಯಾವ ವೃತ್ತಿಯನ್ನು ಅನುಸರಿಸಬೇಕು ಎನ್ನುವುದನ್ನು ವೃತ್ತಿ ಯೋಜನೆಯ ಮೂಲಕ ಗುರುತಿಸಿ, ಅದಕ್ಕೆ ಅನುಗುಣವಾಗಿ ಕೋರ್ಸ್ ಆಯ್ಕೆ ಇರಲಿ. ವೃತ್ತಿಯೋಜನೆಯನ್ನು ಮಾಡುವ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ:

https://youtu.be/MHnPg_sp6E0

ಪ್ರ

2. ನಾನು ಅಂತಿಮ ವರ್ಷದ ಬಿ.ಎ ಮಾಡುತ್ತಿದ್ದು, ಮುಂದೆ ನನಗೆ ಪೊಲೀಸ್ ಆಗುವ ಕನಸಿದೆ. ತಯಾರಿ ಮಾಡುವುದು ಹೇಗೆ?

–ಹೆಸರು, ಊರು ತಿಳಿಸಿಲ್ಲ.

ಪದವಿಯನ್ನು ಪೂರ್ಣಗೊಳಿಸಿದ ನಂತರ ಪೊಲೀಸ್ ಸಬ್ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಹುದ್ದೆಗೆ ಅರ್ಹತೆಯಿರುತ್ತದೆ. ಪದವಿಯ ಜೊತೆ ನಾಯಕತ್ವದ ಕೌಶಲ, ದಿಟ್ಟತನ, ಸಹಭಾಗಿತ್ವದ ಕೌಶಲ, ಉತ್ತಮ ಸಂವಹನ, ಪರಿಶೋಧನಾ ಕೌಶಲ, ಸಮಸ್ಯೆಗಳನ್ನು ಪರಿಹರಿಸುವ ಕೌಶಲಗಳ ಜೊತೆ ಸಕಾರಾತ್ಮಕ ಧೋರಣೆಯಿರಬೇಕು. ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಪಿಎಸ್‌ಐ ನೇಮಕಾತಿಯಲ್ಲಿ ಭಾಗವಹಿಸಿ,  ಭವಿಷ್ಯವನ್ನು ರೂಪಿಸಿಕೊಳ್ಳಬಹುದು.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸನ್ನು ಗಳಿಸಲು ಯೋಜನಾ ಶಕ್ತಿ, ಏಕಾಗ್ರತೆ, ಪರಿಶ್ರಮ, ಸಮಯದ ನಿರ್ವಹಣೆ ಮತ್ತು ನಿರಂತರ ಅಭ್ಯಾಸವಿರಬೇಕು. ನಿಮ್ಮ ಸಾಮರ್ಥ್ಯ, ದೌರ್ಬಲ್ಯಗಳನ್ನು ಗಮನದಲ್ಲಿಟ್ಟುಕೊಂಡು, ಸೂಕ್ತವಾದ ಕಾರ್ಯತಂತ್ರವನ್ನು ರೂಪಿಸಿ.

ಕರ್ನಾಟಕ ಪೊಲೀಸ್ ನೇಮಕಾತಿ ಪ್ರಕ್ರಿಯೆ, ಪರೀಕ್ಷೆಗಳ ವಿವರ ಮತ್ತು ವಿಷಯಸೂಚಿಗೆ ಗಮನಿಸಿ: https://prepp.in/karnataka-police-exam

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT