ಶುಕ್ರವಾರ, ಏಪ್ರಿಲ್ 3, 2020
19 °C

ಪದವಿ, ಸ್ನಾತಕೋತ್ತರ ಪದವೀಧರರಿಗೆ ಏಮ್ಸ್‌ನಲ್ಲಿ 430 ಹುದ್ದೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಖಾಲಿ ಇರುವ 430 ಸೈಂಟಿಸ್ಟ್ ಹಾಗೂ ಬಯೊಕೆಮಿಸ್ಟ್‌ ಹುದ್ದೆಗಳ ನೇಮಕಾತಿಗಾಗಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.

ಹುದ್ದೆಗಳ ಹೆಸರು: ಸೈಂಟಿಸ್ಟ್, ಬಯೊಕೆಮಿಸ್ಟ್‌.

ವಿದ್ಯಾರ್ಹತೆ: ಹುದ್ದೆಗೆ ಸಂಬಂಧಿಸಿದ ವಿಷಯಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಲಿಂಕ್‌ ನೋಡುವುದು.

ವಯೋಮಿತಿ: ಕನಿಷ್ಠ 25, ಗರಿಷ್ಠ 45 (ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿವೆ. ಸರ್ಕಾರಿ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ. 

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹1500. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹1200. ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ನೇಮಕಾತಿ ಪ್ರಕ್ರಿಯೆ: ಆನ್‌ಲೈನ್‌ ಪರೀಕ್ಷೆ, ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಂತಿಮವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು. 

ಅರ್ಜಿ ಸಲ್ಲಿಸಲು ಕೊನೆಯ ದಿನ: 12 ಮಾರ್ಚ್ 2020.

ಅಧಿಸೂಚನೆ ಲಿಂಕ್‌: https://img.freejobalert.com/uploads/2020/02/Notification-AIIMS-New-Delhi-Group-A-B-C-Vacancy.pdf

ವೆಬ್‌ಸೈಟ್‌: https://www.aiims.edu/en.html

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು