ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಹುದ್ದೆ: ಅರ್ಜಿ ಆಹ್ವಾನ

Last Updated 14 ಅಕ್ಟೋಬರ್ 2020, 2:42 IST
ಅಕ್ಷರ ಗಾತ್ರ

ಮೈಸೂರು: ಪ್ರಯೋಗಶಾಲಾ ತಂತ್ರಜ್ಞರು, ಡೇಟಾ ಎಂಟ್ರಿ ಆಪರೇಟರ್‌ಗಳ ಸೇವೆಗಾಗಿ ಮೈಸೂರು ಮಹಾನಗರ ಪಾಲಿಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಲ್ಯಾಬ್ ಟೆಕ್ನಿಷಿಯನ್, ನರ್ಸಿಂಗ್ ಮತ್ತು ಅರೆ ವೈದ್ಯಕೀಯ ಪದವೀಧರರು, ಡಿಪ್ಲೊಮಾ, ವಿಜ್ಞಾನ ಪದವೀಧರರು 20 ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ನೇಮಕಗೊಂಡವರಿಗೆ ಮಾಸಿಕ ₹ 10,000 ಹಾಗೂ ಒಂದು ಸ್ವ್ಯಾಬ್ ಕಲೆಕ್ಷನ್‍ಗೆ ₹ 15 ನೀಡಲಿದೆ.

20 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಾಗಿ ಅರ್ಜಿ ಸಲ್ಲಿಸ ಬಯಸುವವರು ಪಿಯುಸಿ ಅಥವಾ ಕನಿಷ್ಠ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 6 ತಿಂಗಳ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರವನ್ನು ಹೊಂದಿರಬೇಕು. ಈ ಹುದ್ದೆಗೆ ಮಾಸಿಕ ₹ 14,000 ವೇತನ ನೀಡಲಾಗುವುದು.

ಈ ಹುದ್ದೆಗಳು ಮೂರು ತಿಂಗಳ ಅವಧಿಗೆ ಹಾಗೂ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗುತ್ತಿದೆ. ಆಸಕ್ತರು ಪಾಲಿಕೆಯ ಆಯುಕ್ತರ ಕಚೇರಿ ಸಂಪರ್ಕಿಸುವಂತೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಗುರುದತ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನೆ ದತ್ತು ಸ್ವೀಕಾರ

ಮೈಸೂರು: ಮೈಸೂರು ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆಯಡಿ ಸೆಟ್ಟಿಲಪಲ್ಲಿ ಲಲಿತ್ ಸಂಜೀವ ರೆಡ್ಡಿ ಎಂಬುವರು ₹ 1.50 ಲಕ್ಷ ಪಾವತಿಸಿ, ವೇದಾವತಿ ಹೆಸರಿನ ಆನೆಯನ್ನು ಒಂದು ವರ್ಷದ ಅವಧಿಗೆ ದತ್ತು ಸ್ವೀಕರಿಸಿದ್ದಾರೆ ಎಂದು ಮೃಗಾಲಯದ ಪ್ರಕಟಣೆ ತಿಳಿಸಿದೆ.

19ಕ್ಕೆ ಸಭೆ ಮುಂದೂಡಿಕೆ

ಮೈಸೂರು: ಸಂಸದ ಪ್ರತಾಪಸಿಂಹ ಅಧ್ಯಕ್ಷತೆಯಲ್ಲಿ ಅ.14ರ ಬುಧವಾರ ಆಯೋಜಿಸಿದ್ದ 2020-2021ನೇ ಸಾಲಿನ ಎರಡನೇ ತ್ರೈಮಾಸಿಕದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯನ್ನು ಅ.19ಕ್ಕೆ ಮುಂದೂಡಲಾಗಿದೆ.

ಸೋಮವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಈ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT