ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಜಿ ಆಹ್ವಾನ

Last Updated 20 ಜೂನ್ 2020, 8:37 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1,567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1222 ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ.

ಅಂತರ್ಜಾಲ ತಾಣ www.ksp.gov.in ಲಾಗ್‍ಇನ್ ಆಗಿ ಜೂನ್ 22ರಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕ.

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ ಉದ್ಯೋಗಕ್ಕೆ ಸೇರಿ ಅಮೂಲ್ಯ ಜೀವಗಳನ್ನು ರಕ್ಷಿಸಲು ಇದೊಂದು ಸದಾವಕಾಶವಾಗಿದೆ ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT