ಸೋಮವಾರ, ಫೆಬ್ರವರಿ 24, 2020
19 °C

ಅಸಿಸ್ಟೆಂಟ್‌ ಪಬ್ಲಿಕ್‌ ಪ್ರಾಸಿಕ್ಯೂಟರ್: ಖಾಲಿ ಹುದ್ದೆ ಭರ್ತಿಗೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್‌ ಪಬ್ಲಿಕ್‌ ಪ್ರಾಸಿಕ್ಯೂಟರ್ (ಎಪಿಪಿ) ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದು ರಾಜ್ಯ ಸರ್ಕಾರ, ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರದ ಪರ ವಕೀಲರು ಪ್ರಮಾಣ ಪತ್ರದ ಮೂಲಕ ನ್ಯಾಯಪೀಠಕ್ಕೆ ಈ ಮಾಹಿತಿ ಒದಗಿಸಿದರು.

‘ಖಾಲಿ ಇರುವ 205 ಹುದ್ದೆಗಳ ಭರ್ತಿ ಮಾಡಲಾಗುವುದು. ಈ ತಿಂಗಳ ಅಂತ್ಯದಲ್ಲಿ ಅಭ್ಯರ್ಥಿಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಜಿಲ್ಲಾ ನ್ಯಾಯಾಧೀಶರ ನೇತ್ವತ್ವದ ಸಮಿತಿ 205 ಕಾನೂನು ಪದವೀಧರರನ್ನು ಅವರ ಜ್ಯೇಷ್ಠತೆ ಆಧರಿಸಿ ಆಯ್ಕೆ ಮಾಡಲಿದೆ. ಈ ಕುರಿತ ಪ್ರಸ್ತಾವ ಪ್ರಾಸಿಕ್ಯೂಷನ್‌ ಇಲಾಖೆ ಮುಂದಿದೆ’ ಎಂದು ಸರ್ಕಾರದ ವಕೀಲರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು