ಶುಕ್ರವಾರ, ನವೆಂಬರ್ 27, 2020
24 °C

ಬಿಪಿಒ: ಎಲ್ಲಿಂದಲೂ ಕೆಲಸ!

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಬಿಪಿಒ ಹಾಗೂ ಐ.ಟಿ. ಆಧಾರಿತ ಸೇವಾ ಕಂಪನಿಗಳ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವ ಅಥವಾ ದೇಶದ ಎಲ್ಲಿಂದಲಾದರೂ ಕೆಲಸ ಮಾಡುವ ಸೌಲಭ್ಯ ಕಲ್ಪಿಸಲು ಅವಕಾಶವಾಗುವಂತೆ ಕೇಂದ್ರ ಸರ್ಕಾರವು ನಿಯಮಾವಳಿಗಳನ್ನು ಸಡಿಲಿಸಿದೆ.

ಮನೆಯಿಂದಲೇ ಕೆಲಸ ಮಾಡುವ ಸೌಲಭ್ಯವನ್ನು ಶಾಶ್ವತಗೊಳಿಸಲು ಅನುಕೂಲ ಆಗುವಂತೆ ನಿಯಮಗಳನ್ನು ಸಡಿಲಗೊಳಿಸುವಂತೆ ಉದ್ಯಮ ವಲಯವು ಕೇಂದ್ರ ಸರ್ಕಾರವನ್ನು ಆಗ್ರಹಿಸಿತ್ತು. ಮನೆಯಿಂದಲೇ ಕೆಲಸ ನಿರ್ವಹಿಸುವ ಸಂಸ್ಕೃತಿಯನ್ನು ಪ್ರೋತ್ಸಾಹಿಸಲಾಗುವುದು, ಭಾರತದ ಎಲ್ಲಿಂದ ಬೇಕಿದ್ದರೂ ಕೆಲಸ ನಿಭಾಯಿಸುವ ಸೌಲಭ್ಯ ನೀಡಲು ಅನುಕೂಲ ಕಲ್ಪಿಸಲಾಗುವುದು ಎಂದು ದೂರಸಂಪರ್ಕ ಇಲಾಖೆ ಹೊರಡಿಸಿರುವ ನಿಯಮಾವಳಿಗಳಲ್ಲಿ ಹೇಳಲಾಗಿದೆ.

ಕಳೆದ ಕೆಲವು ತಿಂಗಳಿನಲ್ಲಿ ಸರ್ಕಾರವು ಮನೆಯಿಂದಲೇ ಕೆಲಸ ನಿರ್ವಹಿಸುವುದನ್ನು ಪ್ರೋತ್ಸಾಹಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ. ‘ಕೇಂದ್ರದ ಹೊಸ ನಿಯಮಾವಳಿಗಳು ಉದ್ದಿಮೆಗೆ ಉತ್ತೇಜನ ನೀಡಲಿವೆ. ಉದ್ಯೋಗ ಸೃಷ್ಟಿಗೆ ನೆರವಾಗಲಿವೆ’ ಎಂದು ನಾಸ್ಕಾಂ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು