ಶನಿವಾರ, ಮಾರ್ಚ್ 28, 2020
19 °C

ಪ್ರವಾಸೋದ್ಯಮ ಇಲಾಖೆ: ವ್ಯವಸ್ಥಾಪಕ, ಕ್ಲರ್ಕ್‌, ಕುಕ್‌, ಜವಾನ ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿ ಪ್ರವಾಸೋದ್ಯಮ ಇಲಾಖೆಯ ವಿಳಾಸಕ್ಕೆ ಕಳುಹಿಸಬೇಕು.

l ಹುದ್ದೆಗಳು: ಸಹಾಯಕ ವ್ಯವಸ್ಥಾಪಕರು, ಅಡುಗೆಯವರು, ಸ್ವಾಗತಕಾರರು, ಉಗ್ರಾಣಿಕರು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಅಡುಗೆ ಸಹಾಯಕರು, ರೂಂ ಬಾಯ್ಸ್, ಮಾಲಿಗಳು

l ವಿದ್ಯಾರ್ಹತೆ: ಸಹಾಯಕ ವ್ಯವಸ್ಥಾಪಕರು ಹಾಗೂ ಸ್ವಾಗತಕಾರರ ಹುದ್ದೆಗಳಿಗೆ ಹೋಟೆಲ್‌ ನಿರ್ವಹಣೆಯ ಕುರಿತು ಡಿಪ್ಲೊಮಾ ಪದವಿ ಮುಗಿಸಿರಬೇಕು. ಅಡುಗೆಯವರ ಹುದ್ದೆಗೆ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯೊಂದಿಗೆ ಆಹಾರ ನಿರ್ವಹಣೆಗೆ ಸಂಬಂಧಿಸಿದ ಸರ್ಟಿಫಿಕೇಟ್ ಕೋರ್ಸ್ ಮುಗಿಸಿರಬೇಕು. ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಭಾಗದಲ್ಲಿ ಪದವಿ ಮುಗಿಸಿರಬೇಕು. ಉಳಿದ ಹುದ್ದೆಗಳಿಗೆ ಹತ್ತನೇ ತರಗತಿ ಅಥವಾ 7ನೇ ತರಗತಿ ಓದಿರಬೇಕು.

l ಅರ್ಜಿ ಶುಲ್ಕ: ಇಲ್ಲ.

l ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು https://www.kstdc.co/notifications/ ಈ ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಡೌನ್‌ಲೋಡ್‌ ಮಾಡಿಕೊಂಡು, ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

l ಅರ್ಜಿ ಸಲ್ಲಿಸುವ ವಿಳಾಸ: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿ, ಕಾರ್ಯನಿರ್ವಾಹಕರ ಕಚೇರಿ, ನೆಲಮಹಡಿ, ಯಶವಂತಪುರ ಟಿಟಿಎಂಸಿ ಬಿ.ಎಂ.ಟಿ.ಸಿ. ಬಸ್‌ ನಿಲ್ದಾಣ, ಯಶವಂತಪುರ ವೃತ್ತ, ಬೆಂಗಳೂರು – 560022

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 20, 2020

 ವೆಬ್‌ಸೈಟ್‌:  https://www.kstdc.co/notifications/

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು