ಬೆಂಗಳೂರು: ಭಾರತ ಸರ್ಕಾರದರಕ್ಷಣಾ ಸಂಶೋಧನಾ ಹಾಗೂ ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ)ಯಲ್ಲಿ ಖಾಲಿ ಇರುವ 1817 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಪರೀಕ್ಷೆ ಕೇಂದ್ರಗಳು ಇರುವುದರಿಂದ ರಾಜ್ಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಪರೀಕ್ಷೆ ಬರೆಯಬಹುದು.

ನೇಮಕಾತಿಗೊಂಡ ಅಭ್ಯರ್ಥಿಗಳು ದೇಶದಡಿಆರ್ಡಿಒ ಕಚೇರಿಗಳಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಚಿತ್ರದುರ್ಗದಲ್ಲಿ ಪ್ರಾದೇಶಿಕ ಕಚೇರಿಗಳಿವೆ.

ಹುದ್ದೆಗಳಗಳ ವಿವರ...

ಒಟ್ಟು ಹುದ್ದೆಗಳ ಸಂಖ್ಯೆ:1817

ಮೀಸಲಾತಿ ವಿವರ

ಸಾಮಾನ್ಯ–849, ಎಸ್ಸಿ–163, ಎಸ್ಟಿ–114, ಒಬಿಸಿ–503, ಇಡಬ್ಯೂಎಸ್–183, ಇಎಸ್ಎಂ–135 ಎಂಎಸ್ಪಿ–50, ಅಂಗವಿಕಲರು–73

ವಿದ್ಯಾರ್ಹತೆ:ದೇಶದ ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ವೇತನ:ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಅನ್ವಯದಂತೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಇದರ ಅನ್ವಯ ₹18000–59000 ಶ್ರೇಣಿಯಲ್ಲಿ ವೇತನ ಲಸಿಗಲಿದೆ.

ವಯಸ್ಸು:ಕನಿಷ್ಠ18 ವರ್ಷಗಳು, ಗರಿಷ್ಠ25 ವರ್ಷಗಳು

ವಯೋಮಿತಿ ಸಡಿಲಿಕೆ:ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ಅರ್ಜಿ ಶುಲ್ಕ:ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹100, ಪ.ಜಾತಿ/ಪ.ಪಂಗಡ, ಮಾಜಿ ಸೈನಿಕ, ಅಂಗವಿಕಲ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.

ನೇಮಕಾತಿ ವಿಧಾನ:ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಕಂಪ್ಯೂಟರ್ ಬೇಸ್ಡ್ ಟೆಸ್ಟ್, ಎರಡನೇ ಹಂತದಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುವುದು.ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆ ಇರಲಿದೆ. ಎರಡನೇ ಹಂತದ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿಸಲ್ಲಿಸುವ ವಿಧಾನ

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್ಸೈಟ್www.drdo.gov.in ಗೆ ಲಾಗಿನ್ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು2020ರ ಜನವರಿ 23 ಕೊನೆ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಡಿಆರ್ಡಿಒ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಈ ಕೆಳಗೆ ಅಧಿಸೂಚನೆ ಲಿಂಕ್ ನೀಡಲಾಗಿದೆ.

ಅಧಿಸೂಚನೆ ಲಿಂಕ್:https://bit.ly/35S7jkd

ವೆಬ್ಸೈಟ್:www.drdo.gov.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.