ಶುಕ್ರವಾರ, ಫೆಬ್ರವರಿ 26, 2021
19 °C

ಮಂಗಳೂರು ರಿಫೈನರಿ ಮತ್ತು ಎನರ್ಜಿ ಸರ್ವಿಸಸ್‌ನಲ್ಲಿ 465 ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳೂರು ರಿಫೈನರಿ ಆ್ಯಂಡ್‌ ಪೆಟ್ರೊಕೆಮಿಕಲ್ಸ್‌ ಲಿಮಿಟೆಡ್‌ (ಎಂಆರ್‌ಪಿಎಲ್‌) ಹಾಗೂ ಕೇಂದ್ರ ಸರ್ಕಾರದ ಎನರ್ಜಿ ಎಫಿಶಿಯನ್ಸಿ ಸರ್ವಿಸೆಸ್ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಅಧಿಕಾರಿ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಮಂಗಳೂರು ರಿಫೈನರಿ ಆ್ಯಂಡ್‌ ಪೆಟ್ರೊಕೆಮಿಕಲ್ಸ್‌ ಲಿಮಿಟೆಡ್‌ (ಎಂಆರ್‌ಪಿಎಲ್‌)...

ಎಂಆರ್‌ಪಿಎಲ್‌ನಲ್ಲಿ ಖಾಲಿ ಸೆಕ್ಯೂರಿಟಿ ಇನ್‌ಸ್ಪೆಕ್ಟರ್‌, ಜೂನಿಯರ್ ಆಫೀಸರ್, ಜೂನಿಯರ್ ಕೆಮಿಸ್ಟ್ರಿ ಟ್ರೇನಿ, ಟೆಕ್ನಿಕಲ್ ಅಸಿಸ್ಟೆಂಟ್ ಟ್ರೇನಿ, ಡ್ರಾಫ್ಟ್‌ಮೆನ್‌ ಟ್ರೇನಿ, ಟ್ರೇನಿ ಅಸಿಸ್ಟೆಂಟ್‌ ಸೇರಿದಂತೆ ಇತರೆ 233 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಕರೆಯಲಾಗಿದೆ. 

ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಡಿಪ್ಲೊಮಾ, ಪದವಿಯನ್ನು ಪಡೆದಿರಬೇಕು.

ಪರೀಕ್ಷಾ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹100, ಪ.ಜಾತಿ/ಪ.ಪಂಗಡ, ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ. 

ನೇಮಕಾತಿ ವಿಧಾನ: ನೇಮಕಾತಿಯು ಲಿಖಿತ ಹಾಗೂ ಕೌಶಲ ಪರೀಕ್ಷೆ ಮೂಲಕ ನಡೆಯಲಿದೆ. 

ಅರ್ಜಿ ಸಲ್ಲಿಸಲು ಕೊನೆಯ ದಿನ 9 ನವೆಂಬರ್ 2019 ಆಗಿದ್ದು ಹೆಚ್ಚಿನ ಮಾಹಿತಿಗೆ www.mrpl.co.in ಗೆ ಭೇಟಿ ನೀಡಬಹುದು.

ಅಧಿಸೂಚನೆ ಲಿಂಕ್‌: https://bit.ly/2C6M29b

***

ಇಇಎಸ್‌ಎಲ್‌ನಲ್ಲಿ 235 ಹುದ್ದೆಗಳ...

ಕೇಂದ್ರ ಸರ್ಕಾರದ ಎನರ್ಜಿ ಎಫಿಶಿಯನ್ಸಿ ಸರ್ವಿಸೆಸ್ ಲಿಮಿಟೆಡ್‌ (ಇಇಎಸ್‌ಎಲ್‌) ಖಾಲಿ ಇರುವ ಎಂಜಿನಿಯರ್‌, ಅಸಿಸ್ಟೆಂಟ್ ಎಂಜಿನಿಯರ್, ಆಫೀಸರ್, ಅಸಿಸ್ಟೆಂಟ್ ಆಫೀಸರ್‌, ಡೆಪ್ಯುಟಿ ಮ್ಯಾನೇಜರ್‌, ಅಸಿಸ್ಟೆಂಟ್ ಮ್ಯಾನೇಜರ್‌, ಟೆಕ್ನಿಷಿಯನ್, ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.  

ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ಅಧಿಸೂಚನೆ ನೋಡುವುದು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ₹1,000, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹500. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ನವೆಂಬರ್ 30 (2019)ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ www.eeslindia.org ವೆಬ್‌ಸೈಟ್‌ ನೋಡುವುದು.

ಅಧಿಸೂಚನೆ ಲಿಂಕ್‌: https://bit.ly/32hFm2l

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು