ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಸರ್ಕಾರ | ಪೊಲೀಸ್‌ ಇಲಾಖೆ: 54 ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ

Last Updated 21 ಫೆಬ್ರುವರಿ 2020, 7:51 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 54 ವೈಜ್ಞಾನಿಕ ಅಧಿಕಾರಿಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.

ಹುದ್ದೆಗಳ ಸಂಖ್ಯೆ: 54

ಹುದ್ದೆ ಹೆಸರು: ವೈಜ್ಞಾನಿಕ ಅಧಿಕಾರಿಗಳು (Scientific Officer)

ವಿದ್ಯಾರ್ಹತೆ: ವಿಜ್ಞಾನ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಹುದ್ದೆಗಳ ಅನುಸಾರದ ವಿದ್ಯಾರ್ಹತೆ ಮಾಹಿತಿಗೆಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಕ್ಲಿಕ್ಕಿಸಿ ನೋಡಬಹುದು.

ವಯಸ್ಸು: ಕನಿಷ್ಠ 21 ವರ್ಷ, ಗರಿಷ್ಠ 35 ವರ್ಷಗಳು.

ವಯೋಮಿತಿ: ಸರ್ಕಾರಿ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ
*ಸಾಮಾನ್ಯ ಹಾಗೂಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: ₹ 250
*ಪ.ಜಾ / ಪ.ಪಂಗಡ / ಪ್ರವರ್ಗ-1 ರ ಅಭ್ಯರ್ಥಿಗಳಿಗೆ: ₹ 100

ನೇಮಕಾತಿ ವಿಧಾನ, ವೇತನ ಶ್ರೇಣಿ ಸೇರಿದಂತೆ ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆ ಲಿಂಕ್‌ ನೋಡಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ಕಡೆ ದಿನ:18/03/2020

ಅಧಿಸೂಚನೆ ಲಿಂಕ್‌:http://rec19.ksp-online.in/

ವೆಬ್‌ಸೈಟ್‌:https://www.ksp.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT