ಶುಕ್ರವಾರ, ಏಪ್ರಿಲ್ 3, 2020
19 °C

SSLC, ITI ವಿದ್ಯಾರ್ಹತೆ: IOCLನಲ್ಲಿ 500 ಟ್ರೇಡ್‌ ಅಪ್ರೆಂಟಿಸ್‌ಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 500 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ  ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ

ಇವುಗಳಲ್ಲಿ 364 ಟೆಕ್ನಿಕಲ್‌ ಹಾಗೂ 136 ನಾನ್‌ ಟೆಕ್ನಿಕಲ್‌ ಅಪ್ರೆಂಟಿಸ್‌ಗಳ ನೇಮಕಾತಿ ನಡೆಯಲಿದೆ. ನೇಮಕಾತಿಗೊಂಡ ಅಭ್ಯರ್ಥಿಗಳು ಮಹಾರಾಷ್ಟ್ರ,ಗುಜರಾತ್‌, ಗೋವಾ, ಮಧ್ಯಪ್ರದೇಶ ಹಾಗೂ ಚತ್ತೀಸ್‌ಗಢ ರಾಜ್ಯಗಳಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಟ್ರೇಡ್‌ ಅಪ್ರೆಂಟಿಸ್ ಸಂಖ್ಯೆ: 500

ಟ್ರೇಡ್‌ಗಳು: ಫಿಟ್ಟರ್‌, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕಾನಿಕ್‌, ಇನ್‌ಸ್ಟ್ರೂಮೆಂಟ್ ಮೆಕಾನಿಕ್‌, ಮೆಕಾನಿಸ್ಟ್ ಟ್ರೇಡ್‌

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ಜತೆಗೆ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ: 28 ಫೆಬ್ರುವರಿ 2020ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 24 ವರ್ಷ ವಯಸ್ಸಾಗಿರಬೇಕು.

ಅರ್ಜಿ ಶುಲ್ಕ: ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ

ನೇಮಕಾತಿ: ಕೌಶಲ್ಯ ಪರೀಕ್ಷೆ ಅಥವಾ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರ | ಪೊಲೀಸ್‌ ಇಲಾಖೆ: 54 ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳನ್ನು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಭರ್ತಿ ಮಾಡಿದ ಆನ್‌ಲೈನ್‌ ಅರ್ಜಿಯಲ್ಲಿ ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳನ್ನು ಅಪ್‌ಲೋಡ್‌ ಮಾಡಬೇಕು. ತರಬೇತಿ ಭ್ಯತೆ, ನೇಮಕಾತಿ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನ https://www.iocl.com ವೆಬ್‌ಸೈಟ್‌ ನೋಡಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 03 ಮಾರ್ಚ್‌ 2020

ಲಿಂಕ್‌: https://www.iocl.com/PeopleCareers/PDF/Engagement_of_Technical_and_Non_Technical_Trade.pdf

ವೆಬ್‌ಸೈಟ್‌: https://www.iocl.com

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು