ಭಾನುವಾರ, ಸೆಪ್ಟೆಂಬರ್ 27, 2020
27 °C

8,575 ‘ಡಿ’ ಗ್ರೂಪ್ ಹುದ್ದೆಗಳಿಗೆ ಬಂದ ಅರ್ಜಿಗಳೆಷ್ಟು ಗೊತ್ತೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ 8,575 ಗ್ರೂಪ್ ‘ಡಿ’ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಇದುವರೆಗೆ ಒಟ್ಟು 3,23,690 ಮಂದಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಸಿದ್ದಾರೆ.

ಗ್ರೂಪ್ ‘ಡಿ’ ಹುದ್ದೆಗಳ ಭರ್ತಿಯು ಕಠಿಣ ಸ್ಪರ್ಧೆಗೆ ಸಾಕ್ಷಿಯಾಗಲಿದೆ ಎಂದು  ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (ಜೆಕೆಎಸ್‌ಎಸ್‌ಬಿ) ಅಧಿಕಾರಿಗಳು ತಿಳಿಸಿದ್ದಾರೆ.

ಜೆಕೆಎಸ್‌ಎಸ್‌ಬಿ ಇತ್ತೀಚೆಗೆ ಜಿಲ್ಲಾ, ವಿಭಾಗೀಯ ಮತ್ತು ಕೇಂದ್ರ ಪ್ರಾಂತ್ಯದ ವಿವಿಧ ಇಲಾಖೆಗಳಲ್ಲಿನ ’ಡಿ’ ಗ್ರೂಪ್‌ ಹುದ್ದೆಗಳ ಭರ್ತಿಗೆ ಜಾಹೀರಾತು ನೀಡಿತ್ತು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಜುಲೈ 10ರಿಂದ ಅವಕಾಶ ಕಲ್ಪಿಸಿದೆ.

‘ಭಾನುವಾರದ ವೇಳೆಗೆ 3,23,690 ಮಂದಿ ನೋಂದಣಿ ಮಾಡಿಕೊಂಡಿದ್ದು, 1,68,810 ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು