ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ವಕೀಲರಾಗುವವರಿಗೆ ಅವಕಾಶ: 124 ಸರ್ಕಾರಿ ಅಭಿಯೋಜಕರ ಹುದ್ದೆಗಳಿಗೆ ಅರ್ಜಿ

Last Updated 21 ಅಕ್ಟೋಬರ್ 2019, 6:54 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರದ ಅಭಿಯೋಗ ಮತ್ತು ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌ ಬಿ ವೃಂದದ 124 ಸರ್ಕಾರಿ ಅಭಿಯೋಜಕರು (ಸಹಾಯಕ ವಕೀಲರು) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

124 ಹುದ್ದೆಗಳಲ್ಲಿ ಹೈದರಾಬಾದ್‌ ವಿಭಾಗದ ಅಭ್ಯರ್ಥಿಗಳಿಗೆ 24 ಹುದ್ದೆಗಳನ್ನು ಮೀಸಲಿಡಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು. ಕರ್ನಾಟಕ ಪರೀಕ್ಷೆ ಪ್ರಾಧಿಕಾರದ ವೆಬ್‌ಸೈಟ್‌ www. kea.kar.nic.in ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸಬೇಕು. 08–11–2019 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿರುತ್ತದೆ.

ವಿದ್ಯಾರ್ಹತೆ:ಭಾರತದ ಯಾವುದೇ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಹಾಗೂ ಸಿವಿಲ್‌ ಹಾಗೂ ಕ್ರಿಮಿನಲ್‌ ನ್ಯಾಯಾಲಯಗಳಲ್ಲಿ ಕನಿಷ್ಠ 3 ವರ್ಷಗಳ ವಕೀಲರಾಗಿ ಕೆಲಸ ಮಾಡುತ್ತಿರಬೇಕು.

ವಯೋಮಿತಿ:ಸಾಮಾನ್ಯ ಅಭ್ಯರ್ಥಿಗಳಿಗೆ 37, ಪ್ರವರ್ಗ2ಎ,ಪ್ರವರ್ಗ2ಬಿ,ಪ್ರವರ್ಗ3ಎ,ಪ್ರವರ್ಗ3ಬಿ ಅಭ್ಯರ್ಥಿಗಳಿಗೆ 40 ವರ್ಷಗಳು ಹಾಗೂ ಪರಿಶಿಷ್ಠ ವರ್ಗ ಮತ್ತು ಪರಿಶಿಷ್ಠ ಜಾತಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 42 ವರ್ಷಗಳು.

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಇತರರಿಗೆ ₹ 825,ಪರಿಶಿಷ್ಠ ವರ್ಗ ಮತ್ತು ಪರಿಶಿಷ್ಠ ಜಾತಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ₹ 425 ಅರ್ಜಿ ಶುಲ್ಕವಿದೆ.

ವೇತನ ಶ್ರೇಣಿ: ₹ 43100–83900 ಹಾಗೂ 2006ರ ಅನ್ವಯದಂತೆ ನೂತನ ಪಿಂಚಣಿ ಸೌಲಭ್ಯ ಅನ್ವಯವಾಗುತ್ತದೆ.

ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆ ಇರುತ್ತದೆ. ಮುಖ್ಯಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದವರಿಗೆ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. 25 ಅಂಕಗಳಿಗೆ ಸಂದರ್ಶನ ನಡೆಸಲಾಗುವುದು.

ಪರೀಕ್ಷೆ ಸ್ವರೂಪ ಹಾಗೂ ನೇಮಕಾತಿ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗೆಕರ್ನಾಟಕ ಪರೀಕ್ಷೆ ಪ್ರಾಧಿಕಾರದ ವೆಬ್‌ಸೈಟ್‌ ನೋಡಬಹುದು ಅಥವಾ ಈ ಕೆಳಗಿನ ಲಿಂಕ್‌ ಅನ್ನು ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

https://bit.ly/35TDFv2

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT