ಗುರುವಾರ , ಏಪ್ರಿಲ್ 9, 2020
19 °C

ವಾಕ್ ಮತ್ತು ಶ್ರವಣ ಸಂಸ್ಥೆ: ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕೆಲಸ ಮಾಡಬೇಕು.

 ಹುದ್ದೆಗಳ ವಿವರ: ಪ್ರೊಫೆಸರ್‌, ಹೆಡ್ ಪೇಟೆಂಟ್ ಸೆಲ್‌, ಅಸಿಸ್ಟೆಂಟ್ ಆಡಿಟ್‌ ಆಫೀಸರ್ ಹಾಗೂ ಅಕೌಂಟೆಂಟ್‌

 ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಂಬಿಬಿಎಸ್‌, ಎಂಎಸ್, ಬಿಇ, ಬಿ.ಟೆಕ್ ಪದವಿ ಹೊಂದಿರಬೇಕು.

ವಯೋಮಿತಿ: ಪ್ರೊಫೆಸರ್ ಹುದ್ದೆಗೆ ಗರಿಷ್ಠ 50 ವರ್ಷ, ಹೆಡ್ ಪೇಟೆಂಟ್ ಸೆಲ್ ಹುದ್ದೆಗೆ ಗರಿಷ್ಠ 35 ವರ್ಷ, ಅಸಿಸ್ಟೆಂಟ್ ಆಡಿಟ್ ಆಫೀಸರ್ ಹುದ್ದೆಗೆ ಗರಿಷ್ಠ 30 ವರ್ಷ ಮತ್ತು ಅಕೌಂಟೆಂಟ್ ಹುದ್ದೆಗೆ ಗರಿಷ್ಠ 56 ವರ್ಷ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 100, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹ 40. ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಅರ್ಜಿ ಸಲ್ಲಿಕೆಯ ವಿಧಾನ: ಆಸಕ್ತ ಆಭ್ಯರ್ಥಿಗಳು https://aiishmysore.in/en/ ಈ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಅರ್ಜಿಯನ್ನು ಭರ್ತಿ ಮಾಡಿ – ಮುಖ್ಯ ಆಡಳಿತಾಧಿಕಾರಿ, ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006 ಈ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 27, 2020 ‌

ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ವೆಬ್‌ಸೈಟ್‌ ನೋಡಬಹುದು: https://aiishmysore.in/en/

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು