ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ₹ 44,900: ಹೈಕೋರ್ಟ್‌ನಲ್ಲಿ ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ

Last Updated 5 ಫೆಬ್ರುವರಿ 2020, 9:04 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನಲ್ಲಿಖಾಲಿ ಇರುವ 27ಅಸಿಸ್ಟೆಂಟ್ಕೋರ್ಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ: 27

ಮೀಸಲಾತಿ: ಸಾಮಾನ್ಯ–1, ಪ.ಜಾತಿ–10, ಪ.ಪಂಗಡ–02, ಹಿಂದುಳಿದ ವರ್ಗ–09, ಹಿಂಬಾಕಿ–05 (3 ಬ್ಯಾಕ್‌ಲಾಗ್‌, ಇತರೆ 2)

ವಿದ್ಯಾರ್ಹತೆ:ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಕರ್ನಾಟಕ ಪೌಢ ಶಿಕ್ಷಣ ಮಂಡಳಿ ಅಥವಾ ಟೆಕ್ನಿಕಲ್ ಬೋರ್ಡ್ ನಡೆಸುವ ಆಂಗ್ಲ ಕಮರ್ಷಿಯಲ್ ಪ್ರಾಕ್ಟೀಸ್ / ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಡಿಪ್ಲೋಮದಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಅಥವಾ ಪ್ರೊಫೆಶಿಯನ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪೌಢ ಶಿಕ್ಷಣ ಮಂಡಳಿ ನಡೆಸುವ ಆಂಗ್ಲ ಪೌಢ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.

ವೇತನ ಶ್ರೇಣಿ: ₹ 44,900 (ಮೂಲ) ರಿಂದ 1,42,400 ಶ್ರೇಣಿಯಲ್ಲಿ ವೇತನ ನೀಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರೆ ಹಿಂದುಳಿದವರ್ಗದ ಅಭ್ಯರ್ಥಿಗಳಿಗೆ ₹ 400, ಪ.ಜಾತಿ/ಪ.ಪಂಗಡ/ಪ್ರವರ್ಗ–1ರ ಅಭ್ಯರ್ಥಿಗಳು/ ಅಂಗವಿಕಲ ಅಭ್ಯರ್ಥಿಗಳಿಗೆ ₹ 200ಅರ್ಜಿ ಶುಲ್ಕ ಇರುತ್ತದೆ.

ಪ್ರೊಬೇಷನರಿ ಅವಧಿ: ನೇಮಕಗೊಂಡ ಅಭ್ಯರ್ಥಿಗಳಿಗೆಎರಡು ವರ್ಷಗಳಪ್ರೊಬೇಷನರಿ ಇರುತ್ತದೆ. ಅಗತ್ಯವಿದ್ದರೆ ಹೆಚ್ಚಿನ ಅವಧಿಗೆ ವಿಸ್ತರಿಸಬಹುದಾಗಿದೆ.

ವಯಸ್ಸಿನ ಗರಿಷ್ಠ ಮಿತಿ

ಸಾಮಾನ್ಯ ಅಭ್ಯರ್ಥಿಗಳು: 35 ವರ್ಷಗಳು

ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು: 38 ವರ್ಷಗಳು

ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು: 40 ವರ್ಷಗಳು

ನೇಮಕಾತಿ ವಿಧಾನ: ಒಟ್ಟು 100 ಅಂಕಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. 20 ಅಂಕಗಳಿಗೆ ಮೌಖಿಕ ಪರೀಕ್ಷೆಯು ಇರಲಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಅನ್ನು ಕ್ಲಿಕ್ಕಿಸಿ ನೋಡಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-03-2020

ಅಧಿಸೂಚನೆ ಲಿಂಕ್‌:https://bit.ly/2Swy9cf

ವೆಬ್‌ಸೈಟ್‌:http://karnatakajudiciary.kar.nic.in/Index.asp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT