ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಧೀಶರಾಗಲು ಅವಕಾಶ: ಹೈಕೋರ್ಟ್‌ನಲ್ಲಿ 21 ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ

Last Updated 26 ಅಕ್ಟೋಬರ್ 2019, 15:56 IST
ಅಕ್ಷರ ಗಾತ್ರ

ಬೆಂಗಳೂರು: 21ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಹೈಕೋರ್ಟ್‌ ಅರ್ಜಿ ಆಹ್ವಾನಿಸಿದ್ದು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಜಿಲ್ಲಾ ನ್ಯಾಯಾಧೀಶರ ನೇಮಕಾತಿ ಅಧಿಸೂಚನೆಯನ್ನು ಅಕ್ಟೋಬರ್‌ 21ರಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಒಟ್ಟು 21 ನ್ಯಾಯಾಧೀಶರನ್ನು ನೇಮಕ ಮಾಡಿಕೊಳ್ಳಲಾಗುವುದು. 21 ಹುದ್ದೆಗಳ ಪೈಕಿ ಸಾಮಾನ್ಯರಿಗೆ 2, ಮಹಿಳೆಯರಿಗೆ 6, ಗ್ರಾಮೀಣ ಅಭ್ಯರ್ಥಿಗಳಿಗೆ 8, ಮಾಜಿ ಸೈನಿಕರಿಗೆ 5 ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಹುದ್ದೆಗಳಲ್ಲಿ 17 ಬ್ಯಾಕ್‌ಲಾಗ್‌ ಹಾಗೂ ನಾಲ್ಕು ಹೊಸ ಹುದ್ದೆಗಳು ಸೇರಿವೆ.

ವಿದ್ಯಾರ್ಹತೆ:ಮಾನ್ಯತೆ ಪಡೆದವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿ ಪಡೆದಿರಬೇಕು ಹಾಗೂ ಕನಿಷ್ಠ 7 ವರ್ಷಗಳ ಕಾಲ ಹೈಕೋರ್ಟ್‌ ಅಥವಾ ಕೆಳ ನ್ಯಾಯಾಲಯಗಳಲ್ಲಿ ವಕೀಲರಾಗಿ ಕೆಲಸ ಮಾಡಿರಬೇಕು.

ವಯಸ್ಸು:ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ,ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 48 ವರ್ಷ ವಯಸ್ಸನ್ನು ಮಿತಿಗೊಳಿಸಲಾಗಿದೆ.

ನೇಮಕಾತಿ ವಿಧಾನ: ಎರಡು ಹಂತಗಳ ಪರೀಕ್ಷೆಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಮೊದಲನೇ ಹಂತದಲ್ಲಿ ಪೂರ್ವಭಾವಿ ಪರೀಕ್ಷೆ ಹಾಗೂ ಎರಡನೇ ಹಂತದಲ್ಲಿ ಮುಖ್ಯ ಪರೀಕ್ಷೆ ಇರುತ್ತದೆ.

ಪರೀಕ್ಷಾ ಶುಲ್ಕ

ಪೂರ್ವಭಾವಿ ಪರೀಕ್ಷೆ:ಸಾಮಾನ್ಯ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹500, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ₹250

ಮುಖ್ಯ ಪರೀಕ್ಷೆ:ಸಾಮಾನ್ಯ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹1000, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ₹750

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳನ್ನು ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕಡೆ ದಿನಾಂಕ:ನವೆಂಬರ್ 6, 2019 (ರಾತ್ರಿ 11:59 ವರೆಗೆ)

ಅಧಿಸೂಚನೆ ಹಾಗೂಸಾಮಾನ್ಯ ಸೂಚನೆಗಳಿಗಾಗಿ ಈ ಕೆಳಗಿ ನೀಡಿರುವ ಲಿಂಕ್‌ ಅನ್ನುಕ್ಲಿಕ್ ಮಾಡಿ

ಅಧಿಸೂಚನೆ:https://bit.ly/31MkUqq

ನ್ಯಾಯಾಧೀಶರ ನೇಮಕಾತಿಯಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ karnatakajudiciary.kar.nic.in ನಿಂದ ಮಾಹಿತಿಯನ್ನು ಪಡೆಯಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT