ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಸರ್ಕಾರ: 1112 FDA ಹುದ್ದೆಗಳ ನೇಮಕಾತಿಗೆ ಅರ್ಜಿ, ವೇತನ ₹ 43,000

Last Updated 3 ಫೆಬ್ರುವರಿ 2020, 10:39 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ಹಾಗೂ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ಪಡೆದಿರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. 27 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ1112 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಹುದ್ದೆಗಳಲ್ಲಿ 137 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿಡಲಾಗಿದೆ.

ಹುದ್ದೆಗಳ ವಿವರ

ಹುದ್ದೆಗಳ ಸಂಖ್ಯೆ: 1112 ( ಇದರಲ್ಲಿ 137 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿವೆ)

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ‌ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.(ಸಹಾಯಕ/ ಪ್ರಥಮ ದರ್ಜೆ ಸಹಾಯಕ ಎರಡು ಹುದ್ದೆಗಳಿಗೂ)

ವೇತನ ಶ್ರೇಣಿ

1)ಸಹಾಯಕ ಹುದ್ದೆ:₹ 30,350 – ₹ 58,250

2) ಪ್ರಥಮ ದರ್ಜೆ ಸಹಾಯಕ: ₹ 27,650- ₹ 52, 650

ವಯಸ್ಸು

*ಕನಿಷ್ಠ 21 ವರ್ಷಗಳಾಗಿರಬೇಕು.

ವಯೋಮಿತಿ ಸಡಿಲಿಕೆ

* ಸಾಮಾನ್ಯವರ್ಗದ ಅಭ್ಯರ್ಥಿಗಳು– ಗರಿಷ್ಠ 35 ವರ್ಷ

* ಹಿಂದುಳಿದ ವರ್ಗದ ಅಭ್ಯರ್ಥಿಗಳು– ಗರಿಷ್ಠ 38 ವರ್ಷ

* ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು– 40 ವರ್ಷ

ಅರ್ಜಿ ಶುಲ್ಕ

- ಸಾಮಾನ್ಯ ವರ್ಗದ ಅಭ್ಯರ್ಥಿಗಳು–₹ 600

- ಹಿಂದುಳಿದ ವರ್ಗದ ಅಭ್ಯರ್ಥಿಗಳು–₹ 300

- ಮಾಜಿ ಸೈನಿಕರು–₹ 50

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆದಾಗ್ಯೂ ಈ ಅಭ್ಯರ್ಥಿಗಳುಪ್ರೋಸೆಸಿಂಗ್ ಚಾರ್ಜ್‌ ₹ 35 ಪಾವತಿಸಬೇಕು. ಅರ್ಜಿ ಶುಲ್ಕ ಪಾತಿಸುವ ಅಭ್ಯರ್ಥಿಗಳು ಸಹಹೆಚ್ಚುವರಿಯಾಗಿ₹ 35 ಪ್ರೋಸೆಸಿಂಗ್ ಚಾರ್ಜ್‌ ಪಾವತಿಸಬೇಕು.

ನೇಮಕಾತಿ ವಿಧಾನ:ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರ ಮೆರಿಟ್‌ಲಿಸ್ಟ್‌ ತಯಾರಿಸಿ ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸಬಹುದಾದ ಅಭ್ಯರ್ಥಿಗಳು ಕರ್ನಾಟಕಲೋಕಸೇವಾ ಆಯೋಗದ ವೆಬ್‌ಸೈಟ್‌ಗೆ www.kpsc.kar.nic.in ಲಾಗಿನ್‌ ಆಗಿ ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು.

ಮುಖ್ಯವಾದ ಮಾಹಿತಿ

*ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :06-03-2020

*ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 10-05-2020

* ಅಧಿಸೂಚನೆ ಲಿಂಕ್‌:https://bit.ly/31lTOrs

* ಕೆಪಿಎಸ್‌ಸಿ ವೆಬ್‌ಸೈಟ್‌:http://www.kpsc.kar.nic.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT