ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KPSC: 106 KAS ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿ, ಮಾರ್ಚ್‌ 6 ಕಡೆ ದಿನ

Last Updated 3 ಫೆಬ್ರುವರಿ 2020, 9:54 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 106 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧಿಸೂಚನೆ ಹೊರಡಿಸಿದೆ.

ಇದು2017-18ನೇ ಸಾಲಿನಪ್ರೊಬೇಷನರಿ ಹುದ್ದೆಗಳನೇಮಕಾತಿಯಾಗಿದೆ.ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 11 ಇಲಾಖೆಗಳಲ್ಲಿಗ್ರೂಪ್‌-ಎ, ಗ್ರೂಪ್‌-ಬಿ ಹುದ್ದೆಗಳು ಖಾಲಿ ಇವೆ.

ಒಟ್ಟು ಹುದ್ದೆಗಳ ಸಂಖ್ಯೆ: 106

ವಿದ್ಯಾರ್ಹತೆ:ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

ವಯಸ್ಸು

*ಕನಿಷ್ಠ 21 ವರ್ಷಗಳಾಗಿರಬೇಕು.

ವಯೋಮಿತಿ ಸಡಿಲಿಕೆ

* ಸಾಮಾನ್ಯವರ್ಗದ ಅಭ್ಯರ್ಥಿಗಳು– ಗರಿಷ್ಠ 35 ವರ್ಷ

* ಹಿಂದುಳಿದ ವರ್ಗದ ಅಭ್ಯರ್ಥಿಗಳು– ಗರಿಷ್ಠ 38 ವರ್ಷ

* ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು– 40 ವರ್ಷ

ಅರ್ಜಿ ಶುಲ್ಕ

- ಸಾಮಾನ್ಯ ವರ್ಗದ ಅಭ್ಯರ್ಥಿಗಳು–₹ 600

- ಹಿಂದುಳಿದ ವರ್ಗದ ಅಭ್ಯರ್ಥಿಗಳು–₹ 300

- ಮಾಜಿ ಸೈನಿಕರು–₹ 50

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆದಾಗ್ಯೂ ಈ ಅಭ್ಯರ್ಥಿಗಳುಪ್ರೋಸೆಸಿಂಗ್ ಚಾರ್ಜ್‌ ₹ 35 ಪಾವತಿಸಬೇಕು.ಅರ್ಜಿ ಶುಲ್ಕ ಪಾತಿಸುವ ಅಭ್ಯರ್ಥಿಗಳು ಸಹ ಹೆಚ್ಚುವರಿಯಾಗಿಪ್ರೋಸೆಸಿಂಗ್ ಚಾರ್ಜ್‌ ₹ 35 ಪಾವತಿಸಬೇಕು.

ನೇಮಕಾತಿ

ನೇಮಕಾತಿಯು ಮೂರು ಹಂತಗಳಲ್ಲಿ ನಡೆಯಲಿದೆ. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಅನ್ನು ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದು.

ಅರ್ಜಿ ಸಲ್ಲಿಸುವ ವಿಧಾನ

* ಲೋಕಸೇವಾ ಆಯೋಗದ ವೆಬ್‌ಸೈಟ್‌ www.kpsc.kar.nic.in ಲಾಗಿನ್‌ ಆಗಿ ಅನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು.

* ಅಭ್ಯರ್ಥಿಗಳು ತಮ್ಮ ವಿವರ, ಶೈಕ್ಷಣಿಕ ಅರ್ಹತೆ ವಿವರ ಮತ್ತು ಇತರೆ ವಿವರಗಳನ್ನು ತುಂಬಬೇಕು

* ಇತರೆ ವಿವರ ನೀಡಿ ಅಪ್ಲಿಕೇಶನ್‌ ಅನ್ನು ಸಬ್‌ಮಿಟ್‌ ಮಾಡಿ.

* ಅಂತಿಮ ಹಂತದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕು.

ಮುಖ್ಯ ಮಾಹಿತಿ

*ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 06-03-2020

*ಪೂರ್ವಭಾವಿ ಪರೀಕ್ಷಾ ದಿನಾಂಕ : 17-05-2020

*ಮುಖ್ಯ ಪರೀಕ್ಷಾ ದಿನಾಂಕ : 2020 ರ ಆಗಸ್ಟ್‌/ ಸೆಪ್ಟೆಂಬರ್

* ಅಧಿಸೂಚನೆ ಲಿಂಕ್‌:https://bit.ly/37WTsKk

* ಕೆಪಿಎಸ್‌ಸಿ ವೆಬ್‌ಸೈಟ್‌:http://www.kpsc.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT