ಮಂಗಳವಾರ, ಫೆಬ್ರವರಿ 18, 2020
31 °C

ಕರ್ನಾಟಕ ಸರ್ಕಾರ: ಪ್ರವಾಸೋದ್ಯಮ ನಿಗಮದಲ್ಲಿ 79 ಹುದ್ದೆಗಳು, ವೇತನ ₹30,000

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. 

ಒಟ್ಟು ಹುದ್ದೆಗಳ ಸಂಖ್ಯೆ: 79

ಹುದ್ದೆಗಳ ಸಂಖ್ಯೆ: ವ್ಯವಸ್ಥಾಪಕ–04, ಸಹಾಯಕ ವ್ಯವಸ್ಥಾಪಕ–03, ಸ್ವಾಗತಕಾರರು–04, ದ್ವಿತೀಯ ದರ್ಜೆ ಸಹಾಯಕ–07, ಸೂಪರ್‌ವೈಸರ್‌–04, ಸ್ಟೋರ್ ಕೀಪರ್‌–04, ಅಡುಗೆಯವರು–06, ಸಹಾಯಕ ಅಡುಗೆಯವರು–06, ಅಡುಗೆ ಸಹಾಯಕರು–10, ಸಹಾಯಕರು (ರೂಂ ಬಾಯ್‌)– 28.

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ತಮ್ಮ ಸ್ವವಿವರವನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. 

ವಿದ್ಯಾರ್ಹತೆ: ಅಗತ್ಯ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ನೋಡುವುದು. ಕನಿಷ್ಠ 3 ವರ್ಷಗಳ ಸೇವಾ ಅನುಭವವನ್ನು ಕಡ್ಡಾಯವಾಗಿ ಹೊಂದಿರಬೇಕು. 

ಅಗತ್ಯ ದಾಖಲೆಗಳು ಹಾಗೂ  ಇತ್ತೀಚಿನ ಭಾವಚಿತ್ರದೊಂದಿಗೆ ದಿನಾಂಕ 03.02.2020ರೊಳಗೆ ಈ ಕೆಳಕಂಡ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ವಿಳಾಸ
ವ್ಯವಸ್ಥಾಪಕರು (ಆಡಳಿತ)
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
ಕಾರ್ಯನಿರ್ವಾಹಕ ಕಚೇರಿ
ನೆಲಮಹಡಿ, ಯಶವಂತಪುರ ಟಿಟಿಎಂಸಿ,
ಬಿ.ಎಂ.ಟಿ.ಸಿ ಬಸ್ ನಿಲ್ದಾಣ,
ಯಶವಂತಪುರ ವೃತ್ತ,
ಬೆಂಗಳೂರು-560 022

ಷರತ್ತು ಮತ್ತು ನಿಬಂಧನೆಗಳು
* ಅಭ್ಯರ್ಥಿಗಳು ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸ್ಪೀಡ್ ಪೋಸ್ಟ್/ರಿಜಿಸ್ಟರ್ ಪೋಸ್ಟ್/ ಕೋರಿಯರ್ ಅಥವಾ ನೇರವಾಗಿ ಮೇಲೆ ತಿಳಿಸಿದ ವಿಳಾಸಕ್ಕೆ ಬಂದು ಸಲ್ಲಿಸಬಹುದಾಗಿದೆ.
* ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಪದನಾಮವನ್ನು ಲಕೋಟೆ/ಪೋಸ್ಟ್ ಕವರ್‌ ಮೇಲೆ ನಮೂದಿಸತಕ್ಕದ್ದು, ತಪ್ಪಿದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
*  ದಿನಾಂಕ: 03.02.2020 ರ ನಂತರದಲ್ಲಿ ಸ್ವೀಕೃತಗೊಂಡ ಅರ್ಜಿಗಳನ್ನು ಯಾವುದೇ ಕಾರಣಕ್ಕೂ  ಪರಿಗಣಿಸಲಾಗುವುದಿಲ್ಲ.
* ನಿಗಮವು ಯಾವುದೇ ಕಾರಣವನ್ನು ನೀಡದೆ ಅರ್ಜಿಯನ್ನು ಸ್ವೀಕರಿಸಲು ಅಥವಾ ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತದೆ.
* ನಿಗಮವು ನೀಡಿರುವ ನಮೂನೆಯಲ್ಲದೇ, ಇತರೆ ಯಾವುದೇ ನಮೂನೆಯಲ್ಲಿ ಸ್ವವಿವರವನ್ನು ಸಲ್ಲಿಸಿದರೆ ಯಾವುದೇ ಕಾರಣಕ್ಕೂ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.
* ಅಭ್ಯರ್ಥಿಗಳು ಕರ್ನಾಟಕದ ಯಾವುದೇ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ಧರಿರಬೇಕು.
* ಸದರಿ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು.

ಅಧಿಸೂಚನೆ ಲಿಂಕ್‌: https://bit.ly/36lilOm

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03.02.2020

ವೆಬ್‌ಸೈಟ್‌: https://www.kstdc.co/notifications

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು