ಸೋಮವಾರ, ಫೆಬ್ರವರಿ 24, 2020
19 °C

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 6.83 ಲಕ್ಷ ಹುದ್ದೆಗಳು ಖಾಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವ ದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 6.83 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇರುವುದಾಗಿ ಬುಧವಾರ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.

ಕಳೆದ ವರ್ಷ ಸುಮಾರು 38,02,779 ಹುದ್ದೆಗಳ ಪೈಕಿ 31,18,956 ಗಳನ್ನು ಭರ್ತಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಆದಾಯ ಮತ್ತು ಸಂಶೋಧನೆ ಇಲಾಖೆಯ ವಾರ್ಷಿಕ ವರದಿಯನ್ನಾಧರಿಸಿ ರಾಜ್ಯಸಭೆಗೆ ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ.   

 2018ರ ಮಾರ್ಚ್ ವೇಳೆಗೆ 6,83,823 ಹುದ್ದೆಗಳು ಖಾಲಿ ಇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಿವೃತ್ತಿ, ರಾಜೀನಾಮೆ, ಸಾವು, ಬಡ್ತಿ ಮುಂತಾದ ಕಾರಣಗಳಿಗಾಗಿ ಸ್ಥಾನಗಳು ಖಾಲಿಯಾಗಿದ್ದು, ಸರ್ಕಾರದ ನೇಮಕಾತಿ ನಿಯಮಗಳ ಪ್ರಕಾರ ಬಾಕಿ ಇವರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಅವರು ವಿವರಿಸಿದರು. 

ನೇಮಕಾತಿ ಪ್ರಕ್ರಿಯೆಯು ನಿರಂತರವಾಗಿದ್ದು ಅದು ಇಲಾಖೆಗಳ ವಾರ್ಷಿಕ ಯೋಜನೆಗಳಿಗೆ ಅನುಗುಣವಾಗಿ ಆಯ್ಕೆ ಪ್ರಕ್ರಿಯೆ ನಡೆಯತ್ತದೆ ಎಂದರು. 2019–20 ಸಾಲಿನಲ್ಲಿ ಯುಪಿಎಸ್‌ಸಿ, ಎಸ್‌ಎಸ್‌ಸಿ ಮತ್ತು ರೈಲ್ವೆ ಇಲಾಖೆಯಿಂದ ಸುಮಾರು 1,34 ಲಕ್ಷ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಬೇಡಿಕೆ ಬಂದಿದೆ ಎಂದರು.  ರೈಲ್ವೆ ನೇಮಕಾತಿ ಮಂಡಳಿಯಿಂದ 1,16,391 ಹುದ್ದೆಗಳು, ಎಸ್‌ಎಸ್‌ಸಿಯಿಂದ 13,995 ಹುದ್ದೆಗಳು ಮತ್ತು ಕೇಂದ್ರ ಲೋಕ ಸೇವಾ ಆಯೋಗದಿಂದ 4,399 ಹುದ್ದೆಗಳ ನೇಮಕಾತಿಗೆ ಬೇಡಿಕೆ ಬಂದಿದೆ ಎಂದು ಅವರು ವಿವರಿಸಿದರು.

ನಿರ್ದಿಷ್ಟ ಸಮಯದೊಳಗೆ ನೇಮಕಾತಿ ಮಾಡುವಂತೆ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು