ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ₹ 12,500–55,000 | ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ  510 ಹುದ್ದೆಗಳು

Last Updated 27 ಜುಲೈ 2020, 10:09 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಸರ್ಕಾರದ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯು ವಿವಿಧ ಶ್ರೇಣಿಯ 510 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಇವುಎರಡು ವರ್ಷದ ಅವಧಿಯ ಗುತ್ತಿಗೆ ಆಧಾರಿತ ಹುದ್ದೆಗಳಾಗಿವೆ.

ಗ್ರಾಮೀಣ ಭಾಗದಲ್ಲಿ ಕೆಲಸ ಮಾಡಲು ಆಸಕ್ತರಾಗಿರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್‌ ಹಾಗೂ ಅಧಿಸೂಚನೆಯನ್ನು ನೋಡಬಹುದು.

ಎನ್‌ಐಆರ್‌ಡಿ ಯೋಜನೆ ವ್ಯಾಪ್ತಿಯಲ್ಲಿ, ರಾಜ್ಯ ಮಟ್ಟದ ಕಾರ್ಯಕ್ರಮ ಸಂಯೋಜಕರು, ಯಂಗ್ ಫೆಲೋ, ಕ್ಲಸ್ಟರ್ ಮಟ್ಟದ
ಸಂಪನ್ಮೂಲ ವ್ಯಕ್ತಿ ಹುದ್ದೆಗಳ ನೇಮಕಾತಿ ನಡೆಯಲಿದೆ.

ಹುದ್ದೆಗಳ ಸಂಖ್ಯೆ

1) ರಾಜ್ಯ ಮಟ್ಟದ ಕಾರ್ಯಕ್ರಮ ಸಂಯೋಜಕರು: 10 ಹುದ್ದೆಗಳು
2) ಯಂಗ್ ಫೆಲೋ: 250 ಹುದ್ದೆಗಳು
3) ಕ್ಲಸ್ಟರ್ ಮಟ್ಟದ ಸಂಪನ್ಮೂಲ ವ್ಯಕ್ತಿ: ಹುದ್ದೆಗಳು 250

ಹುದ್ದೆಗಳ ವಿವರ

1) ರಾಜ್ಯ ಮಟ್ಟದ ಕಾರ್ಯಕ್ರಮ ಸಂಯೋಜಕರು

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಸಮಾಜ ಶಾಸ್ತ್ರ, ಎಂಎಸ್‌ಡಬ್ಲ್ಯೂ ಹಾಗೂ ಗ್ರಾಮೀಣಾಭಿವೃದ್ಧಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಾಗೂ ಇಂಗ್ಲಿಷ್‌, ಹಿಂದಿಯಲ್ಲಿ ಬರೆಯಲು ಮತ್ತು ಓದಲು ಬರಬೇಕು.

ವೇತನ:₹ 55,000 ಸೇರಿದಂತೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯಸ್ಸು: ಕನಿಷ್ಠ–30, ಗರಿಷ್ಠ–50

2) ಯಂಗ್ ಫೆಲೋ ಹುದ್ದೆಗಳು

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಸಮಾಜ ಶಾಸ್ತ್ರ, ಎಂಎಸ್‌ಡಬ್ಲ್ಯೂ ಹಾಗೂ ಗ್ರಾಮೀಣಾಭಿವೃದ್ಧಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಾಗೂ ಇಂಗ್ಲಿಷ್‌, ಹಿಂದಿಯಲ್ಲಿ ಬರೆಯಲು ಮತ್ತು ಓದಲು ಬರಬೇಕು.

ವೇತನ: ₹ 35,000 ಸೇರಿದಂತೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯಸ್ಸು: ಕನಿಷ್ಠ–25, ಗರಿಷ್ಠ–30

3) ಕ್ಲಸ್ಟರ್ ಮಟ್ಟದ ಸಂಪನ್ಮೂಲ ವ್ಯಕ್ತಿ ಹುದ್ದೆಗಳು

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಾಗೂ ಇಂಗ್ಲಿಷ್‌, ಹಿಂದಿಯಲ್ಲಿ ಬರೆಯಲು ಮತ್ತು ಓದಲು ಬರಬೇಕು.

ವೇತನ: ₹ 12,500 ಸೇರಿದಂತೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯಸ್ಸು: ಕನಿಷ್ಠ–26,ಗರಿಷ್ಠ 40 ವರ್ಷಗಳನ್ನು ಮೀರಿರಬಾರದು

ಅರ್ಜಿ ಸಲ್ಲಿಸುವ ವಿಧಾನ

ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು. ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಬೇಕು.
ಅಂಕಪಟ್ಟಿಗಳ ತಪಾಸಣೆ ಹಾಗೂ ಸಂದರ್ಶನದ ಮೂಲಕ ನೇರ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-08-2020

ಅಧಿಸೂಚನೆ ಲಿಂಕ್: http://nirdpr.org.in/nird_docs/vacancies/job240720.pdf

ವೆಬ್‌ಸೈಟ್‌: http://career.nirdpr.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT