ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಸರ್ಕಾರ: SSLC ಪಾಸ್‌ ಆದವರಿಗೆ 2814 ಡ್ರೈವರ್‌, ಕಂಡಕ್ಟರ್‌ ಹುದ್ದೆಗಳು

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
Last Updated 11 ಡಿಸೆಂಬರ್ 2019, 6:27 IST
ಅಕ್ಷರ ಗಾತ್ರ

ಬೆಂಗಳೂರು:ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ2814 ಡ್ರೈವರ್‌, ಕಂಡಕ್ಟರ್‌ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳಾದ ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ, ಹುಬ್ಬಳ್ಳಿ,ಧಾರವಾಡ ನಗರ, ಗ್ರಾಮಾಂತರ ಗದಗ, ಹಾವೇರಿ, ಉತ್ತರ ಕನ್ನಡ, ಶಿರಸಿ ಡಿಪೋಗಳ ವ್ಯಾಪ್ತಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಒಟ್ಟು ಹುದ್ದೆಗಳ ವಿವರ

ಚಾಲಕ (ಡ್ರೈವರ್): 2500

ಚಾಲಕ–ಕಂ– ನಿರ್ವಾಹ (ಕಂಡಕ್ಟರ್‌): 259

ಹಿಂಬಾಕಿ ಹುದ್ದೆಗಳು (ಚಾಲಕ): 55

ಅರ್ಹತೆಗಳು
ಚಾಲಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ (10 ನೇ ತರಗತಿ)ಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಚಾಲ್ತಿ ಇರುವ ಭಾರೀ ಸರಕು ಸಾಗಾಣಿಕೆ ವಾಹನ ಚಾಲನಾ ಪರವಾನಿಗೆ ಪಡೆದು ಕನಿಷ್ಠ 2 ವರ್ಷಗಳಾಗಿರಬೇಕು. ಜತೆಗೆ ಕರ್ನಾಟಕ PSV ಬ್ಯಾಡ್ಜ್‌ ಹೊಂದಿರಬೇಕು.

ಚಾಲಕ ಕಮ್ ನಿರ್ವಾಹಕ: ಅಭ್ಯರ್ಥಿಗಳು SSLC ಅಥವಾ ತತ್ಸಮಾನ ತೇರ್ಗಡೆಯಾಗಿರಬೇಕು. ಹಾಗೂ ಚಾಲ್ತಿ ಇರುವ ಭಾರೀ ಸರಕು ಸಾಗಾಣಿಕೆ ವಾಹನ ಚಾಲನಾ ಪರವಾನಿಗೆ ಪಡೆದು ಕನಿಷ್ಠ 2 ವರ್ಷಗಳಾಗಿರಬೇಕು.ಇದರ ಜತೆಗೆ ನಿರ್ವಾಹಕ ಪರವಾನಿಗೆ ಮತ್ತು ಕರ್ನಾಟಕ ಬ್ಯಾಡ್ಜ್‌ ಹೊಂದಿರಬೇಕು.

ವಯಸ್ಸು ಮತ್ತು ವಯೋಮಿತಿ
ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ () ಕನಿಷ್ಠ 24 ವರ್ಷಗಳು ತುಂಬಿರಬೇಕು.

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷಗಳು

ವೇತನ ಶ್ರೇಣಿ: ಚಾಲಕ ಮತ್ತು ಚಾಲಕ-ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 12,400–19,550/-ರೂ ವೇತನವನ್ನು ನೀಡಲಾಗುವುದು.

ನೇಮಕಾತಿ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೂಲ ದಾಖಲಾತಿಗಳ, ದೈಹಿಕ ಅರ್ಹತೆಯ ಪರಿಶೀಲನೆ ಮತ್ತು ಚಾಲನಾ ವೃತ್ತಿ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:ಸಾಮಾನ್ಯ/ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹ 600 ಹಾಗೂಪ.ಜಾತಿ, ಪ.ಪಂಗಡ. ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹ 300 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳ ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕಿ ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-01-2020 ( ಸಂಜೆ 5.30)

ಅಧಿಸೂಚನೆಯ ಲಿಂಕ್‌:https://bit.ly/2EcxEgl

ವೆಬ್‌ಸೈಟ್‌:https://www.nwkrtc.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT