ಭಾರತೀಯ ರೈಲ್ವೆ ಇಲಾಖೆಯ ಪಶ್ಚಿಮ– ಮಧ್ಯ ವಿಭಾಗದಲ್ಲಿ 1273 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್ಎಸ್ಎಲ್ಸಿ ಹಾಗೂ ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ: 1 ಜನವರಿ 2020ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 24.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹100+ ಜಿಎಸ್ಟಿ.