ಶುಕ್ರವಾರ, ಏಪ್ರಿಲ್ 3, 2020
19 °C

ಪವರ್‌ ಗ್ರಿಡ್ ಕಾರ್ಪೊರೇಷನ್: ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪವರ್‌ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಸಂಸ್ಥೆ 36 ಸೂಪರ್‌ವೈಸರ್ ಹಾಗೂ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು: ಸೂಪರ್‌ವೈಸರ್ ಹಾಗೂ ಎಂಜಿನಿಯರ್‌

ಹುದ್ದೆಗಳ ಸಂಖ್ಯೆ: 36

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ ಅಥವಾ ಬಿಟೆಕ್‌, ಬಿಎಸ್‌ಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಸೂಪರ್‌ವೈಸರ್‌ ಹುದ್ದೆಗಳಿಗೆ ಡಿಪ್ಲೊಮಾ ಪಡೆದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಮಾರ್ಚ್‌ 6, 2020ಕ್ಕೆ ಅನುಗುಣವಾಗಿ ಅಭ್ಯರ್ಥಿಯ ವಯಸ್ಸು 29 ಮೀರಿರಬಾರದು. ಸರ್ಕಾರಿ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಫೀಲ್ಡ್‌ ಎಂಜಿನಿಯರ್ ₹400, ಫೀಲ್ಡ್ ಸೂಪರ್‌ವೈಸರ್ ₹300. ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕರು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 6, 2020

ಲಿಂಕ್: http://www.powergridindia.com/sites/default/files/Recruitment_for_the_post_of_FE_%26_FS_in_NR-III_on_Contract_Basis_0.pdf

ವೆಬ್‌ಸೈಟ್‌http://www.powergridindia.com

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು