ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC, ITI ಪಾಸಾದವರಿಗೆ ರೈಲ್ವೆಯಲ್ಲಿ ಉದ್ಯೋಗ: 1104 ಅಪ್ರೆಂಟಿಸ್‌ಗಳ ನೇಮಕಾತಿ

Last Updated 10 ಡಿಸೆಂಬರ್ 2019, 11:56 IST
ಅಕ್ಷರ ಗಾತ್ರ

ಬೆಂಗಳೂರು: ರೈಲ್ವೆ ಇಲಾಖೆಯ ಈಶಾನ್ಯ ರೈಲ್ವೆಯಲ್ಲಿ ಖಾಲಿ ಇರುವ 1104 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಶಿಕ್ಷಣ (ಐಟಿಐ) ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಆಸಕ್ತರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು.

ಈಶಾನ್ಯ ರೈಲ್ವೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಿಭಾಗಗಳಲ್ಲಿ ಅಪ್ರೆಂಟಿಸ್‌ಗಳು ಕೆಲಸ ಮಾಡಬೇಕು. ಮೆಕ್ಯಾನಿಕ್, ಕಾರ್ಪೆಂಟರ್, ಡೀಸೆಲ್ ಮೆಕ್ಯಾನಿಕ್, ಎಲೆಕ್ಟ್ರಾನಿಕ್ ಮೆಷಿನ್‌ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಸ್ಟ್, ಪೇಂಟರ್, ವೆಲ್ಡರ್‌ಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ವಿದ್ಯಾರ್ತಹೆ:ಶೇ 50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಪೂರ್ಣಗೊಳಿಸಿರಬೇಕು. ಹಾಗೂ ಆಯಾ ಟ್ರೇಡ್‌ಗಳಲ್ಲಿ ಐಟಿಐ ಪುರ್ಣಗೊಳಿಸಿರಬೇಕು.

ವಯೋಮಿತಿ ಸಡಿಲಿಕೆ: 25 ಡಿಸೆಂಬರ್‌ 2019ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಮಗವಿಕಲರಿಗೆ 10 ವರ್ಷಗಳು.

ನೇಮಕಾತಿ ಪ್ರಕ್ರಿಯೆ:ಕಂಪ್ಯೂಟರ್ ಆಧಾರಿತ ಪರೀಕ್ಷೆ, ಲಿಖಿತ ಪರೀಕ್ಷೆ,ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಶುಲ್ಕ:ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹100, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನ:25 ಡಿಸೆಂಬರ್ 2019.

ಹೆಚ್ಚಿನ ಮಾಹಿತಿಗಾಗಿ ಈ ಅಧಿಸೂಚನೆಯ ಲಿಂಕ್ ಅನ್ನು ಕ್ಲಿಕ್ಕಿಸಿ:https://bit.ly/2rCvVhi

ವೆಬ್‌ಸೈಟ್‌:https://ner.indianrailways.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT