ಬುಧವಾರ, ಜನವರಿ 22, 2020
18 °C

SSLC, ITI ಆದವರಿಗೆ ದಕ್ಷಿಣ ರೈಲ್ವೆಯಲ್ಲಿ ಕೆಲಸ: 1208 ಅಪ್ರೆಂಟಿಸ್‌ಗಳ ನೇಮಕಾತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯ ದಕ್ಷಿಣ ರೈಲ್ವೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1208 ಅಪ್ರೆಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ, ಆಂಧ್ರ, ಕೇರಳ, ತಮಿಳುನಾಡು ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಅಂಡೋಮಾನ್‌ ನಿಕೋಬಾರ್, ಲಕ್ಷದ್ವೀಪ, ಪುದುಚೇರಿಯ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಗಳನ್ನು ಹಾಕಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಹುದ್ದೆಗಳ ವಿವರ: ಫಿಟ್ಟರ್, ವೆಲ್ಡರ್, ಪೇಂಟರ್‌, ಕಾರ್ಪೆಂಟರ್, ಎಲೆಕ್ಟ್ರಿಷಿಯನ್‌, ಎಲೆಕ್ಟ್ರಾನಿಕ್ ಮೆಕಾನಿಕ್, ವೈರ್‌ಮನ್‌, ಟರ್ನರ್‌.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಪೂರ್ಣಗೊಳಿಸಿರುವುದರ ಜತೆಗೆ ಸಂಬಂಧಪಟ್ಟ ಟ್ರೇಡ್‌ಗಳಲ್ಲಿ ಐಟಿಐ ತರಬೇತಿ ಪ್ರಮಾಣಪತ್ರ ಪಡೆದಿರಬೇಕು.

ವಯೋಮಿತಿ: ಕನಿಷ್ಠ–15, ಗರಿಷ್ಠ 24. (ಮೀಸಲಾತಿ ಅನ್ವಯ ಸಡಿಲಿಕೆ ಇರುತ್ತದೆ).

ಇದನ್ನೂ ಓದಿ:  PUC, DEGREE ಪಡೆದವರಿಗೆ ಉದ್ಯೋಗ: ಸಿಬಿಎಸ್‌ಇಯಲ್ಲಿ 357 ಹುದ್ದೆಗಳಿಗೆ ಅರ್ಜಿ

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಮಗವಿಕಲರಿಗೆ 10 ವರ್ಷಗಳು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹100. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 31 ಡಿಸೆಂಬರ್ 2019

ಹೆಚ್ಚಿನ ಮಾಹಿತಿಗೆ: https://bit.ly/345Sed3

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು