ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC ಆದವರಿಗೆ ಸರ್ಕಾರಿ ಉದ್ಯೋಗ: 73 ಸೆಕ್ಯೂರಿಟಿ ಗಾರ್ಡ್‌ ಹುದ್ದೆಗಳಿಗೆ ಅರ್ಜಿ

Last Updated 29 ನವೆಂಬರ್ 2019, 6:58 IST
ಅಕ್ಷರ ಗಾತ್ರ

ಮುಂಬೈ: ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರದಲ್ಲಿ (ಬಾಬಾ ಅಟಾಮಿಕ್‌ ರಿಸರ್ಚ್ ಸೆಂಟರ್‌ –ಬಾರ್ಕ್‌) ಖಾಲಿ ಇರುವ 92 ಸಹಾಯಕ ಸೆಕ್ಯೂರಿಟಿ ಆಫೀಸರ್‌ ಮತ್ತುಸೆಕ್ಯೂರಿಟಿ ಗಾರ್ಡ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2020ನೇ ಸಾಲಿನ ನೇಮಕಾತಿಗಾಗಿ ಈ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರುಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರದ ವಿವಿಧ ಪ್ರಾದೇಶಿಕ ಕಚೇರಿಗಳಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ಮೂಲಕವೇ ಸಲ್ಲಿಸಬೇಕು

ಹುದ್ದೆಗಳ ವಿವರ

1) ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್‌– 19 ಹುದ್ದೆಗಳು

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:₹35,400(ಲೆವೆಲ್‌–1 ನಿಯಮದ ಆನುಸಾರ)

2) ಸೆಕ್ಯುರಿಟಿ ಗಾರ್ಡ್‌– 73 ಹುದ್ದೆಗಳು.

ವಿದ್ಯಾರ್ಹತೆ:ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವೇತನ ಶ್ರೇಣಿ: ₹18,000(ಲೆವೆಲ್‌–1 ನಿಯಮದ ಆನುಸಾರ)

ದೈಹಿಕ ದೇಹದಾಡ್ಯತೆ

ಪುರುಷರು: ಎತ್ತರ–165 ಸಿಎಂಎಸ್‌, ಎದೆಯ ಸುತ್ತಳತೆ–80–85

ಮಹಿಳೆಯರು: ಎತ್ತರ–155 ಸಿಎಂಎಸ್‌

ವಯಸ್ಸು: ಕನಿಷ್ಠ 18, ಗರಿಷ್ಠ 27

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ.

ನೇಮಕಾತಿ ಪ್ರಕ್ರಿಯೆ: ಲಿಖಿತ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಶುಲ್ಕ: ಸೆಕ್ಯೂರಿಟಿ ಆಫೀಸರ್ ಹುದ್ದೆಗೆ ₹150, ಸೆಕ್ಯೂರಿಟಿ ಗಾರ್ಡ್ ಹುದ್ದೆಗೆ ₹100. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಯೋಧ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನ: 6 ಡಿಸೆಂಬರ್ 2019

ಅಧಿಸೂಚನೆ ಲಿಂಕ್‌:https://bit.ly/2rf1XzV

ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ ನೋಡಿ: https://recruit.barc.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT