ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ₹ 45,950: ಸೌತ್ ಇಂಡಿಯನ್ ಬ್ಯಾಂಕ್‌ನಲ್ಲಿ ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ

Last Updated 15 ಫೆಬ್ರುವರಿ 2020, 6:23 IST
ಅಕ್ಷರ ಗಾತ್ರ

ಬೆಂಗಳೂರು: ಸೌತ್‌ ಇಂಡಿಯನ್‌ ಬ್ಯಾಂಕ್‌ನ ವಿವಿಧ ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಮ್ಯಾನೇಜರ್‌ (ಸಿಎ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಭ್ಯರ್ಥಿಗಳು ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಸಿದ್ಧರಾಗಿರಬೇಕು.

ಹುದ್ದೆಯ ಹೆಸರು: ಪ್ರೊಬೇಷನರಿ ಮ್ಯಾನೇಜರ್‌

ಹುದ್ದೆಗಳ ಸಂಖ್ಯೆ: 15

ವಿದ್ಯಾರ್ಹತೆ: ಅಭ್ಯರ್ಥಿಗಳು ಸಿಎ(ಚಾರ್ಟೆಡ್‌ ಅಕೌಂಟೆಂಟ್‌ ಸಂಸ್ಥೆಯಲ್ಲಿ ನೋಂದಾವಣಿಗೊಂಡಿರಬೇಕು) ಪರೀಕ್ಷೆಯಲ್ಲಿ ಪಾಸಾಗಿರಬೇಕು.

ವೇತನ ಶ್ರೇಣಿ: ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 45,950 (ಸಿಟಿಸಿ) ವೇತನ ಪಡೆಯಬಹುದು.

ವಯಸ್ಸು: ಕನಿಷ್ಠ 18 ವರ್ಷಗಳು, ಗರಿಷ್ಠ 28 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಆದಾಗ್ಯೂ ಸರ್ಕಾರಿ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ₹200 ಹಾಗೂ ಇತರೆ ಅಭ್ಯರ್ಥಿಗಳಿಗೆ ₹800 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ನೇಮಕಾತಿ ಪ್ರಕ್ರಿಯೆ: ಗುಂಪು ಚರ್ಚೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌https://www.southindianbank.comಗೆ ಲಾಗಿನ್‌ ಆಗಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2020ರ ಫೆಬ್ರುವರಿ 23 ಕೊನೆ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸೌತ್‌ ಇಂಡಿಯನ್‌ ಬ್ಯಾಂಕ್‌ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ನೋಡಬಹುದು. ಈ ಕೆಳಗೆ ಅಧಿಸೂಚನೆ ಲಿಂಕ್‌ ನೀಡಲಾಗಿದೆ.

ವೆಬ್‌ಸೈಟ್‌: https://www.southindianbank.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT