ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೂನಿಯನ್ ಬ್ಯಾಂಕ್‌ನ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಮೇ 17ರಂದು ಪರೀಕ್ಷೆ

ಆನ್‌ಲೈನ್‌ನಲ್ಲಿ ಪ್ರವೇಶ ಪತ್ರ ಬಿಡುಗಡೆ
Last Updated 27 ಏಪ್ರಿಲ್ 2019, 14:36 IST
ಅಕ್ಷರ ಗಾತ್ರ

ನವದೆಹಲಿ: ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಆಹ್ವಾನಿಸಿದ್ದ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಮೇ 17ರಂದು ಪರೀಕ್ಷೆ ನಡೆಯಲಿದ್ದು,ಆನ್‌ಲೈನ್‌ನಲ್ಲಿ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಪರೀಕ್ಷಾರ್ಥಿಗಳು ಪ್ರವೇಶ ಪತ್ರವನ್ನು ಯೂನಿಯನ್‌ ಬ್ಯಾಂಕ್‌ನಅಧಿಕೃತ ವೆಬ್‌ಸೈಟ್‌ನಲ್ಲಿ unionbankofindia.co.inಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಪರೀಕ್ಷೆ ಆನ್‌ಲೈನ್‌ನಲ್ಲಿ ನಡೆಯಲಿದ್ದು,ಬೆಂಗಳೂರು, ಚೆನ್ನೈ, ದೆಹಲಿ, ಚಂಡಿಗಡ, ಲಖನೌ, ಕೋಲ್ಕತ್ತ, ಪಟ್ನಾ, ಭುವನೇಶ್ವರ್‌, ಹೈದರಾಬಾದ್‌, ಮುಂಬೈ, ಭೋಪಾಲ್‌ ಸೇರಿದಂತೆ ಹಲವೆಡೆ ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿಸಲಿದ್ದಾರೆ.

ಪ್ರಶ್ನೆಗಳನ್ನು ಇಂಗ್ಲೀಷ್‌ ಹಾಗೂ ಹಿಂದಿ ಭಾಷೆಯಲ್ಲಿ ಕೇಳಲಾಗುತ್ತದೆ. ಒಟ್ಟಾರೆ 200 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 120 ನಿಮಿಷ ಕಾಲಾವಕಾಶ ನೀಡಲಾಗಿರುತ್ತದೆ.

ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಅರ್ಹರಾಗಿರುತ್ತಾರೆ. ಸಂದರ್ಶನಕ್ಕೆ 50 ಅಂಕಗಳನ್ನು ನಿಗದಿಪಡಿಸಲಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT