ಸೋಮವಾರ, ಜನವರಿ 20, 2020
20 °C

418 ಹುದ್ದೆಗೆ ಭರ್ತಿಗೆ ಯುಪಿಎಸ್‌ಸಿ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನ್ಯಾಷನಲ್ ನೇವೆಲ್‌ ಅಕಾಡೆಮಿಯಲ್ಲಿ 418 ಹುದ್ದೆಗಳ ಭರ್ತಿಗೆ ಕೇಂದ್ರ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಗಣಿತ ಮತ್ತು ಭೌತವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ಓದಿರಬೇಕು.

ವಯೋಮಿತಿ: 2001 ಜುಲೈ 2ರಿಂದ 2004 ಜುಲೈ 1ರೊಳಗೆ ಜನಿಸಿದವರಾಗಿರಬೇಕು.

ನೇಮಕಾತಿ ಪ್ರಕ್ರಿಯೆ: ಪರೀಕ್ಷೆ ಹಾಗೂ ಸಂದರ್ಶನ

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಇತರೆ ಅಭ್ಯರ್ಥಿಗಳಿಗೆ ₹100.

ಅರ್ಜಿ ಸಲ್ಲಿಸಲು ಕೊನೆಯ ದಿನ: 28 ಜನವರಿ 2020

ಹೆಚ್ಚಿನ ಮಾಹಿತಿಗೆ: https://bit.ly/36N5hCs

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು