ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UPSC: 796 IAS, IPS ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿ, ಮಾರ್ಚ್‌ 3 ಕಡೆ ದಿನ

Last Updated 12 ಫೆಬ್ರುವರಿ 2020, 11:17 IST
ಅಕ್ಷರ ಗಾತ್ರ

ನವದೆಹಲಿ:ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ) 2020ನೇ ಸಾಲಿನ ಐಎಎಸ್, ಐಪಿಎಸ್‌ ಸೇರಿದಂತೆ ಇನ್ನಿತರ ಹುದ್ದೆಗಳ ನಾಗರಿಕ ಸೇವಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳುಯುಪಿಎಸ್​ಸಿ ಅಧಿಕೃತ ವೆಬ್​ಸೈಟ್‌ಗೆ ಲಾಗಿನ್‌ ಆಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾರ್ಚ್‌ 03 ಕೊನೆಯ ದಿನವಾಗಿದೆ. ಪೂರ್ವಭಾವಿ ಪರೀಕ್ಷೆಜೂನ್ ಹಾಗೂ ಮುಖ್ಯ ಪರೀಕ್ಷೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿವೆ.

ಹುದ್ದೆಗಳ ಸಂಖ್ಯೆ: 796 (24 ಹುದ್ದೆಗಳು ಅಂಗವಿಕಲರಿಗೆ ಮೀಸಲು)

ವಿದ್ಯಾರ್ಹತೆ: ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು. ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.

ವಯಸ್ಸು

*ಕನಿಷ್ಠ 21 ವರ್ಷಗಳಾಗಿರಬೇಕು.

ವಯೋಮಿತಿ ಸಡಿಲಿಕೆ

* ಸಾಮಾನ್ಯವರ್ಗದ ಅಭ್ಯರ್ಥಿಗಳು– ಗರಿಷ್ಠ 32 ವರ್ಷ

* ಹಿಂದುಳಿದ ವರ್ಗದ ಅಭ್ಯರ್ಥಿಗಳು– ಗರಿಷ್ಠ 35 ವರ್ಷ

* ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು– 37 ವರ್ಷ

* ಅಂಗವಿಕಲ ಅಭ್ಯರ್ಥಿಗಳಿಗೆ –42 ವರ್ಷಗಳು

ಅರ್ಜಿ ಶುಲ್ಕ

ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹ 100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ನೇಮಕಾತಿ:ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಅನ್ನು ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದು.

ಅರ್ಜಿ ಸಲ್ಲಿಸುವ ವಿಧಾನ

* ಲೋಕಸೇವಾ ಆಯೋಗದ ವೆಬ್‌ಸೈಟ್‌https://upsc.gov.in ಗೆ ಲಾಗಿನ್‌ ಆಗಿ ಅನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು.

* ಆನ್‌ಲೈನ್‌ ಅರ್ಜಿಯನ್ನು ಎರಡು ಹಂತಗಳಲ್ಲಿ ಭರ್ತಿ ಮಾಡಬೇಕು.

ಮುಖ್ಯ ಮಾಹಿತಿ

*ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :03-03-2020

* ಯುಪಿಎಸ್‌ಸಿ ವೆಬ್‌ಸೈಟ್‌:https://upsc.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT