ಶೈಕ್ಷಣಿಕ ಚಟುವಟಿಕೆಗೆ ಚಾಲನೆ

7

ಶೈಕ್ಷಣಿಕ ಚಟುವಟಿಕೆಗೆ ಚಾಲನೆ

Published:
Updated:
Deccan Herald

‘ವಿದ್ಯಾರ್ಥಿಗಳಿಗೆ ಮಾತೃಭಾಷೆಯ ಜತೆಗೆ ಜಾಗತಿಕ ಭಾಷೆಯ ಅರಿವು ಅಗತ್ಯ’ ಎಂದು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್. ಜಾಫೆಟ್ ಅಭಿಪ್ರಾಯಪಟ್ಟರು.

ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಜಾಗತಿಕ ಭಾಷಾ ಅಧ್ಯಯನ ಕೇಂದ್ರದ 2018-19ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ‘ನಗರ ಕೇಂದ್ರಿತ ವಿಶ್ವವಿದ್ಯಾಲಯವಾಗಿ ಅಭಿವೃದ್ಧಿ ಹೊಂದುತ್ತಿರುವ ಬೆಂಗಳೂರು ಕೇಂದ್ರ ವಿವಿಗೆ ಜಾಗತಿಕ ಭಾಷೆಯ ಅಧ್ಯಯನ ಪೀಠದ ಅವಶ್ಯಕತೆ ಹೆಚ್ಚಿದೆ. ವಿದ್ಯಾರ್ಥಿಗಳು ಮಾತೃಭಾಷೆಯ ಜತೆಗೆ ಜಾಗತಿಕ ಭಾಷೆಗೂ ಆದ್ಯತೆ ನೀಡಬೇಕು. ಇದರಿಂದ ಸರ್ವಾಂಗೀಣ ಉನ್ನತಿ ಹಾಗೂ ಲೋಕಜ್ಞಾನ ಹೆಚ್ಚಿಸಿಕೊಳ್ಳಲು ಸಾಧ್ಯ. ಅಲ್ಲದೇ ಉದ್ಯೋಗ ಪಡೆಯುವ ದೃಷ್ಟಿಯಿಂದಲೂ ಅತಿ ಅವಶ್ಯ’ ಎಂದು ಹೇಳಿದರು.

ಕಾರ್ಯಕ್ರಮದ ಸಂಯೋಜಕಿ ಡಾ.ಜ್ಯೋತಿ ವೆಂಕಟೇಶ್ ಮಾತನಾಡಿ, ಜಾಗತಿಕ ಭಾಷಾ ಅಧ್ಯಯನ ವಿಭಾಗವು ಪ್ರಸಕ್ತ ಸಾಲಿನಿಂದ ಬೆಂಗಳೂರು ಕೇಂದ್ರ ವಿವಿಯ ಸಂಯೋಜನೆಗೆ ಒಳಪಟ್ಟಿದೆ. ಜಾಗತಿಕ ಭಾಷೆಗೆ ಸಂಬಂಧಿಸಿದ ಹಲವು ಕೋರ್ಸ್‌ಗಳನ್ನು ವಿಭಾಗದಿಂದ ನಡೆಸಲಾಗುತ್ತಿದೆ. ಜಾಗತಿಕ ಭಾಷೆಯ ಡಿಪ್ಲೊಮಾ, ಉನ್ನತ ಡಿಪ್ಲೊಮಾ, ಅತ್ಯಾಧುನಿಕ ಡಿಪ್ಲೊಮಾ ಅಲ್ಪಾವಧಿ ಮತ್ತು ದೀರ್ಘಾವಧಿ ಕೋರ್ಸ್‌ಗಳನ್ನು ಇಲ್ಲಿವೆ ಎಂದು ವಿವರಿಸಿದರು.

ಸಿಟಿಒ ಅಸೋಸಿಯೇಟ್ ಜನರಲ್ ಡೆವಿಡ್ ವೆರ್ಡೀರ್ ಹಾಗೂ ವಿಭಾಗದ ಬೋಧಕ, ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಹಾಜರಿದ್ದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !