ಸೋಮವಾರ, ಜನವರಿ 25, 2021
16 °C
ಆಂಧ್ರಪ್ರದೇಶ ಹೈಕೋರ್ಟ್‌ ನೀಡಿದ ತೀರ್ಪಿನ ಉಲ್ಲೇಖ

ಇಂಗ್ಲಿಷ್‌ ಮಾಧ್ಯಮ ಶಾಲೆ ರದ್ದುಪಡಿಸಿ: ಕಸಾಪ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆಂಧ್ರಪ್ರದೇಶದ ಮಾತೃಭಾಷಾ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಿಸಿದ ಕ್ರಮವನ್ನು ಅಲ್ಲಿನ ಹೈಕೋರ್ಟ್‌ ರದ್ದುಪಡಿಸಿದೆ. ರಾಜ್ಯದಲ್ಲೂ ಈಗಾಗಲೇ ಆರಂಭಿಸಿರುವ ಒಂದು ಸಾವಿರ ಇಂಗ್ಲಿಷ್ ಮಧ್ಯಮ ಶಾಲೆಗಳನ್ನು ರದ್ದುಪಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಸರ್ಕಾರವನ್ನು ಒತ್ತಾಯಿಸಿದೆ.‌

ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ಅವರು ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಈ ಮನವಿಗೆ ಕಲಬುರ್ಗಿಯಲ್ಲಿ ನಡೆದ 85ನೇ ಕನ್ನಡ ಸಾಹಿತ್ಯ ಸಮ್ಮೆಳನದ ಅಧ್ಯಕ್ಷ ಡಾ.ಎಚ್‌.ಎಸ್.ವೆಂಕಟೇಶಮೂರ್ತಿ ಮತ್ತು ಅಭಿವೃದ್ಧಿ ಶಿಕ್ಷಣ ತಜ್ಞ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಈ ಹಿಂದಿನ ಸರ್ಕಾರ ಒಂದು ಸಾವಿರ ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭಿಸುವ ನಿಟ್ಟಿನಲ್ಲಿ ಹೊರಡಿಸಿದ್ದ ಆದೇಶ ರದ್ದುಪಡಿಸುವುದರ ಜತೆಗೆ ಹೊಸದಾಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸುವ ಎಲ್ಲಾ ಪ್ರಸ್ತಾವನೆಗಳನ್ನು ಪುನರ್‌ ಪರಿಶೀಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಕನ್ನಡ ಮಾಧ್ಯಮ ಶಾಲೆಗಳನ್ನು ಬಲವರ್ಧನೆಗೊಳಿಸಬೇಕು. ಇಂಗ್ಲಿಷ್‌ ಅನ್ನು ಪ್ರಬುದ್ಧವಾಗಿ ಬಳಸಲು  ಸಾಧ್ಯವಾಗುವಷ್ಟರ ಮಟ್ಟಿಗೆ ಒಂದು ಭಾಷೆಯನ್ನಾಗಿ ಕಲಿಸುವ ಬಗ್ಗೆ ಗಂಭೀರ ಯೋಚನೆ ಮಾಡಬೇಕು. ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಅನುಮತಿ ನೀಡುವ ಬಗ್ಗೆಯೂ ಸರ್ಕಾರ ಪುನರ್ ಪರಿಶೀಲನೆ ನಡೆಸಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು