ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭ

Last Updated 12 ಆಗಸ್ಟ್ 2020, 14:29 IST
ಅಕ್ಷರ ಗಾತ್ರ
ADVERTISEMENT
""
""
""

ಬೆಂಗಳೂರು: ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ (ಆಗಸ್ಟ್ 13) ಪ್ರಥಮ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಅಗತ್ಯ ಸೌಲಭ್ಯಗಳಿದ್ದರೆ ಆನ್‌ಲೈನ್ ಮೂಲಕವೇ ದಾಖಲಾತಿ ಪ್ರಕ್ರಿಯೆ ನಿರ್ವಹಿಸಬೇಕು. ಅಂಥ ವ್ಯವಸ್ಥೆ ಇಲ್ಲದ ಕಾಲೇಜುಗಳು ಅರ್ಜಿ ವಿತರಣೆ ಪ್ರಕ್ರಿಯೆಯನ್ನು ಕೋವಿಡ್-19 ತಡೆ ಸೂಚನೆಗಳಿಗೆ ಅನುಗುಣವಾಗಿ ನಿರ್ವಹಿಸಬೇಕು ಎಂದು ಸುತ್ತೋಲೆ ತಿಳಿಸಿದೆ.

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಗುಂಪು ಸೇರಲು ಅವಕಾಶ ಕೊಡಬಾರದು. ಆಯ್ಕೆ ಪಟ್ಟಿ ಪ್ರಕಟಿಸಿದ ನಂತರವೂ ವಿದ್ಯಾರ್ಥಿಗಳ ದಾಖಲಾತಿಗೆ ತಂಡಗಳನ್ನು ವಿಂಗಡಿಸಬೇಕು ಎಂದು ಹೇಳಲಾಗಿದೆ.

ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು 2020-21ರ ಸಾಲಿಗೆ ಯಾವುದೇ ಶುಲ್ಕ ಹೆಚ್ಚಿಸುವಂತಿಲ್ಲ. ಕಳೆದ ಸಾಲಿಗಿಂತ ಕಡಿಮೆ ಶುಲ್ಕ ಪಡೆಯಲು ಆಡಳಿತ ಮಂಡಳಿಗಳಿಗೆ ಸ್ವಾತಂತ್ರ್ಯವಿದೆ ಎಂದು ನಿರ್ದೇಶಕರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT