ಮಂಗಳವಾರ, ಮೇ 18, 2021
28 °C

ಸಿಇಟಿ, ನೀಟ್ ತಯಾರಿಗೆ ‘ಗೆಟ್‌ಸೆಟ್‌ಗೊ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (ಎನ್‌ಇಇಟಿ–ನೀಟ್) ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಸೋಮವಾರದಿಂದ (ಏ.20) ತಂತ್ರಜ್ಞಾನ ಆಧರಿತ ‘ಗೆಟ್‌ಸೆಟ್‌ಗೊ’ ಕಾರ್ಯಕ್ರಮ ಆರಂಭಿಸಲಿದೆ.

ಏನಿದು ‘ಗೆಟ್‌ಸೆಟ್‌ಗೊ’: ಸಿಂಚು ಇನ್ಫೊಟೆಕ್ ಮತ್ತು ದೀಕ್ಷಾ ಆನ್‌ಲೈನ್ ಪರೀಕ್ಷೆಗೆ ಪೂರಕವಾದ ಎಲ್ಲ ಕಲಿಕಾ ವಿಷಯಗಳನ್ನು ಒಳಗೊಂಡ ವೆಬ್ ಪೋರ್ಟಲ್ ಮತ್ತು ಆ್ಯಂಡ್ರಾಯ್ಡ್‌ ಆ್ಯಪ್‌ ಅಭಿವೃದ್ಧಿಪಡಿಸಿವೆ. getcetgo.in ವೆಬ್ ಪೋರ್ಟಲ್ ಮತ್ತು ಗೂಗಲ್‌ ಪ್ಲೇಸ್ಟೋರ್‌ನ ಆ್ಯಂಡ್ರಾಯ್ಡ್‌ ಆ್ಯಪ್‌ ‘GetCETGo’ ದಿಂದ (3-4 ದಿನಗಳಲ್ಲಿ ಆ್ಯಪ್‌ ಬಳಕೆಗೆ ಲಭ್ಯವಾಗಲಿದೆ) ವಿದ್ಯಾರ್ಥಿಗಳಿಗೆ ಮಾಹಿತಿ ಸಿಗಲಿದೆ.

ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ ಈ ಯೋಜನೆ ಉಚಿತವಾಗಿ ಲಭ್ಯವಾಗಲಿದೆ. ರಾಜ್ಯ ಸರ್ಕಾರ ಪ್ರತಿ ವಿದ್ಯಾರ್ಥಿಗೆ ₹ 40ಕ್ಕಿಂತ ಕಡಿಮೆ ವೆಚ್ಚದಲ್ಲಿ ಈ ಕ್ರ್ಯಾಶ್‌ ಕೋರ್ಸ್‌ ಒದಗಿಸಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು