ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆ ‘ಜಿಜ್ಞಾಸಾ’ 17 ರಿಂದ

7

ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆ ‘ಜಿಜ್ಞಾಸಾ’ 17 ರಿಂದ

Published:
Updated:

ಹುಬ್ಬಳ್ಳಿ: ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆ ಮತ್ತು ಪ್ರದರ್ಶನ ‘ಜಿಜ್ಞಾಸಾ’ ಜನವರಿ 17ರಿಂದ 19ರ ವರೆಗೆ ನಗರದ ಗೋಕುಲ ರಸ್ತೆಯ ದೇಶಪಾಂಡೆ ಪ್ರತಿಷ್ಠಾನದಲ್ಲಿ ಆಯೋಜಿಸಲಾಗಿದೆ ಎಂದು ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನದ ಪ್ರಾದೇಶಿಕ ವ್ಯವಸ್ಥಾಪಕ ಅನಿಲ್‌ ಜೋಶಿ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ದೇಶಪಾಂಡೆ ಪ್ರತಿಷ್ಠಾನದ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಒಂಬತ್ತನೇ ವರ್ಷದ ‘ಜಿಜ್ಞಾಸ’ ಸ್ಪರ್ಧೆ ಎರಡು ವಿಭಾಗದಲ್ಲಿ ನಡೆಯಲಿದೆ ಎಂದು ಅವರು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

18 ರಾಜ್ಯಗಳ 1200 ವಿಜ್ಞಾನ ಮಾದರಿಗಳು ಈ ವರ್ಷದ ಸ್ಪರ್ಧೆಯಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದ್ದು, ಇದರಲ್ಲಿ ಆಯ್ದ 100 ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಲಾಗುವುದು ಎಂದರು.

5 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ಕಿರಿಯರ ವಿಭಾಗ ಹಾಗೂ 9ರಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಹಿರಿಯರ ವಿಭಾಗದ ಸ್ಪರ್ಧೆ ನಡೆಯಲಿದೆ. ಪ್ರಥಮ ಬಹುಮಾನ ₹ 20 ಸಾವಿರ, ದ್ವಿತೀಯ ₹ 10 ಸಾವಿರ, ತೃತೀಯ ಬಹುಮಾನ ₹ 5 ಸಾವಿರ ಹಾಗೂ ವಿಶೇಷ ಬಹುಮಾನ ಐವರಿಗೆ ತಲಾ ₹ 3 ಸಾವಿರ ನಗದು ನೀಡಲಾಗುವುದು. ಸ್ಪರ್ಧೆಯ ಒಟ್ಟು ಬಹುಮಾನ ಮೊತ್ತ ₹ 2 ಲಕ್ಷ ಇರಲಿದೆ. ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೂ ಪಾರಿತೋಷಕ ಮತ್ತು ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಿದರು.

ದೇಶದ ವಿವಿಧ ರಾಜ್ಯಗಳಿಂದ ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಣ ತಜ್ಞರು, ವಿಜ್ಞಾನಿಗಳು ಸೇರಿದಂತೆ 15 ಸಾವಿರಕ್ಕೂ ಹೆಚ್ಚು ಸಂದರ್ಶಕರು ಭೇಟಿ ನೀಡುವ ನಿರೀಕ್ಷೆ ಇದೆ ಎಂದು ಹೇಳಿದರು.

ಹೆಚ್ಚಿನ ಮಾಹಿತಿಗಾಗಿ 9449596374, 8050849586 ಸಂಪರ್ಕಿಸಬಹುದು.

ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನದ ಪ್ರಮುಖರಾದ ಗುರು ಮದನಳ್ಳಿ, ಆದಿನಾಥ ರಾನಗಟ್ಟಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !