ಶನಿವಾರ, ಡಿಸೆಂಬರ್ 4, 2021
20 °C

ಜೆಇಇ ಪ್ರಾರಂಭ: ಸುರಕ್ಷತಾ ಕ್ರಮ ಪಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೊರೊನಾ ಇರುವುದರಿಂದ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ನಗರದ ಪರೀಕ್ಷಾ ಕೇಂದ್ರಗಳಲ್ಲಿ 25 ಸಾವಿರ ವಿದ್ಯಾರ್ಥಿಗಳು ಮಂಗಳವಾರ ಜೆಇಇ ಮುಖ್ಯ ಪರೀಕ್ಷೆ ಬರೆದರು.

ರಾಜ್ಯದಾದ್ಯಂತ ಒಟ್ಟು 40 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿರುವ ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಈ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ನಡೆಸಲಾಗುತ್ತದೆ.

ಇದೆ 6ರವರೆಗೆ ಜೆಇಇ ಪರೀಕ್ಷೆಗಳು ನಡೆಯಲಿದ್ದು, ಮೊದಲ ದಿನವಾದ ಮಂಗಳವಾರ ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ನಡೆಯಿತು.

ಪರೀಕ್ಷೆಯಲ್ಲಿ ಕೊರೊನಾ ಸೋಂಕಿತ ವಿದ್ಯಾರ್ಥಿಗಳೂ ಭಾಗವಹಿಸಿದ್ದರು. ಇವರಿಗಾಗಿ ವಿಶೇಷ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಕೊಠಡಿ ಮೇಲ್ವಿಚಾರಕರು ಪಿಪಿಇ ಕಿಟ್ ಧರಿಸಿ ಕಾರ್ಯನಿರ್ವಹಿಸಿದರು.

ವಿದ್ಯಾರ್ಥಿಗಳು ಬೆಳಿಗ್ಗೆ 7.30ರಿಂದಲೇ ಪರೀಕ್ಷಾ ಕೇಂದ್ರಗಳನ್ನು ತಲುಪಿದ್ದರು. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಆರೋಗ್ಯ ತಪಾಸಣೆ, ಸ್ಯಾನಿಟೈಸ್ ವ್ಯವಸ್ಥೆ ಮಾಡಲಾಗಿತ್ತು. ಮಾಸ್ಕ್ ಧರಿಸುವುದು ಹಾಗೂ ಕೊಠಡಿಗಳಲ್ಲಿ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು