ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KSET: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ, ಮಾರ್ಚ್‌ 4 ಕೊನೆ ದಿನ

Last Updated 4 ಫೆಬ್ರುವರಿ 2020, 7:08 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಎಸ್‌ಇಟಿ) ಅರ್ಜಿ ಆಹ್ವಾನಿಸಿದ್ದು ಆಸಕ್ತರು ಮಾರ್ಚ್‌ 4ರ ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಏಪ್ರಿಲ್‌ 12ರಂದು 42 ವಿಷಯಗಳಿಗೆ ರಾಜ್ಯದ 11 ನೋಡೆಲ್ ಕೇಂದ್ರಗಳಲ್ಲಿ‍ ಪರೀಕ್ಷೆ ನಡೆಯಲಿದೆ ಎಂದು ಮೈಸೂರು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ವಿಶೇಷ ಮಾಹಿತಿಗಳು...

*ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾಲಯ/ ಪ್ರಥಮ ದರ್ಜೆ ಕಾಲೇಜು/ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಪಕರಾಗಿ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ. ಖಾಸಗಿ ಸಂಸ್ಥೆಗಳಲ್ಲಿ ಆಯಾ ಸಂಸ್ಥೆಗಳ ನಿಯಮ ಮತ್ತು ಒಪ್ಪಂದಗಳಿಗೆ ಒಳಪಟ್ಟಿರುತ್ತಾರೆ.

*ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ಸಾಮಾನ್ಯ ಅಭ್ಯರ್ಥಿಗಳು ಶೇ 55ರಷ್ಟು ಅಂಕಗಳನ್ನು ಪಡೆದಿರಬೇಕು. ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಹಾಗೂ ಅಂಗವಿಕಲರು ಶೇ 50 ರಷ್ಟು ಅಂಕಗಳನ್ನು ಪಡೆದಿರಬೇಕು.

*ವಯಸ್ಸು: ಕೆ–ಸೆಟ್‌ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ವಯಸ್ಸಿನ ಗರಿಷ್ಠ ವಯೋಮಿತಿ ಇರುವುದಿಲ್ಲ.

*ಅರ್ಜಿ ಶುಲ್ಕ

–ಸಾಮಾನ್ಯ ಅಭ್ಯರ್ಥಿಗಳು:₹ 1150/-

–ಇತರೆ ಹಿಂದುಳಿದ ಅಭ್ಯರ್ಥಿಗಳು: ₹950/–

–ಪ.ಜಾತಿ, ಪ.ಪಂಗಡ, ಅಂಗವಿಕಲ ಅಭ್ಯರ್ಥಿಗಳು: ₹650/-

ಪರೀಕ್ಷೆ ಕುರಿತ ಮಾಹಿತಿ, ಅಧ್ಯಯನ ವಿಷಯಗಳು, ಶುಲ್ಕ ಪಾವತಿ ಮಾಡುವ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಅನ್ನು ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದು.

*ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:04ನೇ ಮಾರ್ಚ್‌, 2020

*ಅಧಿಸೂಚನೆ:https://bit.ly/2vQCG1v

*ವೆಬ್‌ಸೈಟ್‌:http://kset.uni-mysore.ac.in/index.php

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT