ಗುರುವಾರ , ಏಪ್ರಿಲ್ 2, 2020
19 °C

KPSC: KAS ಮುಖ್ಯಪರೀಕ್ಷೆ 1250, ಸಂದರ್ಶನ 50 ಅಂಕಕ್ಕೆ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ (ಗ್ರೂಪ್‌ ‘ಎ’ ಮತ್ತು ‘ಬಿ’) ನೇಮಕಾತಿಗೆ ಕೆಪಿಎಸ್‌ಸಿ ನಡೆಸುವ ಮುಖ್ಯಪರೀಕ್ಷೆಯಲ್ಲಿ ಐಚ್ಚಿಕ ವಿಷಯಗಳನ್ನು (ತಲಾ 250 ಅಂಕಗಳ 2 ಪತ್ರಿಕೆ) ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೀಗಾಗಿ, ಒಟ್ಟು 1,750 ಅಂಕಗಳಿಗೆ (ಒಟ್ಟು ಏಳು ಪತ್ರಿಕೆಗಳು) ನಡೆಯುತ್ತಿದ್ದ ಮುಖ್ಯಪರೀಕ್ಷೆಯಲ್ಲಿ 500 ಅಂಕ ಕಡಿತಗೊಂಡು, 1,250 ಅಂಕಗಳಿಗೆ ನಿಗದಿ ಆಗಲಿದೆ. ಅಲ್ಲದೆ, ಈವರೆಗೆ 200 ಅಂಕಗಳಿಗೆ ನಡೆಯುತ್ತಿದ್ದ ವ್ಯಕ್ತಿತ್ವ ಪರೀಕ್ಷೆಯನ್ನು (ಸಂದರ್ಶನ) 50 ಅಂಕಗಳಿಗೆ ಕಡಿತಗೊಳಿಸಲು ತೀರ್ಮಾನಿಸಿದೆ. ವ್ಯಕ್ತಿತ್ವ ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸಿದ ಅಂಕ ಶೇ 80 ದಾಟಿದರೆ ಅಥವಾ ಶೇ 40ಕ್ಕಿಂತ ಕಡಿಮೆಯಾದರೆ ಸಂದರ್ಶನ ಮಂಡಳಿ ಸದಸ್ಯರು ಕಾರಣ ದಾಖಲಿಸಬೇಕು.

ಈ ಬಗ್ಗೆ ‘ಕರ್ನಾಟಕ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ನಿಯಮಗಳು– 2020’ರ ಕರಡು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆಗೆ 15 ದಿನಗಳ ಅವಕಾಶ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು