ಭಾನುವಾರ, ಫೆಬ್ರವರಿ 23, 2020
19 °C
ಪಶ್ಚಿಮ ಬಂಗಾಳ ಶಿಕ್ಷಣ ಸಚಿವರಿಂದ ವಿನೂತನ ಪ್ರಯೋಗ

ಬ್ಯಾಗ್ ಹೊರೆ ತಗ್ಗಿಸಲು ಶಾಲೆಯಲ್ಲೇ ಲಾಕರ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸುವ ಸಲುವಾಗಿ ಶಾಲೆಗಳಲ್ಲೇ ಲಾಕರ್ ವ್ಯವಸ್ಥೆ ತರುವ ಮೂಲಕ ಪಶ್ಚಿಮ ಬಂಗಾಳ ಸರ್ಕಾರ ವಿನೂತನ ಪ್ರಯೋಗಕ್ಕೆ ಮುಂದಾಗಿದೆ.

‘ಶಾಲೆಯಲ್ಲಿ ಇರುವ ಈ ಲಾಕರ್‌ಗಳಲ್ಲಿ ಪುಸ್ತಕ ಮತ್ತಿತರ ಶೈಕ್ಷಣಿಕ ಸಾಮಗ್ರಿಗಳನ್ನು ಇಟ್ಟುಕೊಳ್ಳಬಹುದು. ಇದರಿಂದ ಮಕ್ಕಳು ಪ್ರತಿದಿನ ಮನೆಯಿಂದ ಶಾಲೆಗೆ ಮತ್ತು ಶಾಲೆಯಿಂದ ಮನೆಗೆ ಮಣಭಾರದ ಶಾಲಾ ಬ್ಯಾಗ್ ಹೊತ್ತು ತಿರುಗುವುದು ತಪ್ಪಲಿದೆ’ ಎಂದು ಶಿಕ್ಷಣ ಸಚಿವ ಪಾರ್ಥಾ ಚಟರ್ಜಿ ಹೇಳಿದ್ದಾರೆ. 

‘ರಾಜ್ಯ ಸರ್ಕಾರದ ಎಲ್ಲಾ ಶಾಲೆಗಳಲ್ಲೂ ಈ ವ್ಯವಸ್ಥೆ ಜಾರಿಗೆ ಬರಲಿದೆ. ನರ್ಸರಿಯಿಂದ ಹಿಡಿದು ಹನ್ನೆರಡನೇ ತರಗತಿವರೆಗಿನ ಮಕ್ಕಳು ಇದರ ಪ್ರಯೋಜನ ಪಡೆಯಲಿದ್ದಾರೆ. ಆದರೆ, ಅನುದಾನದ ಕೊರತೆಯಿಂದಾಗಿ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಈ ವ್ಯವಸ್ಥೆ ತರಲಾಗುತ್ತಿಲ್ಲ’ ಎಂದು ಪಾರ್ಥಾ ಚಟರ್ಜಿ ಸ್ಪಷ್ಟಪಡಿಸಿದ್ದಾರೆ.

‘ಹಿಂದು, ಹರೇ ಮತ್ತು ಬೆಥೂನಿ ಸೇರಿದಂತೆ ನಗರ ಕೇಂದ್ರಿತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಲಾಕರ್ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ 1.5 ಕೋಟಿ ಶಾಲಾ ಮಕ್ಕಳು ಪ್ರಯೋಜನ ಪಡೆಯಲಿದ್ದಾರೆ’ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

 ‘ಈ ಬಗ್ಗೆ ಇಲಾಖೆಯಿಂದ ಅಧಿಕೃತ ಆದೇಶ ಬಂದಿಲ್ಲ. ಆದರೆ, ವಿದ್ಯಾರ್ಥಿಗಳಿಗೆ ಇದರಿಂದ ಬಹಳ ಪ್ರಯೋಜನವಾಗಲಿದೆ. ಸರ್ಕಾರದ ನೂತನ ಪ್ರಯೋಗವನ್ನು ನಾನು ಸ್ವಾಗತಿಸುತ್ತೇನೆ’ ಎಂದು ಜಾಧವ್‌ಪುರ ವಿದ್ಯಾಪೀಠದ ಪ್ರಾಂಶುಪಾಲರಾದ ಪರಿಮಳಾ ಭಟ್ಟಾಚಾರ್ಯ ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು