ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(ಆರ್ಟಿಇ) 9 ಮತ್ತು 10 ನೇ ತರಗತಿಗಳಿಗೂ ವಿಸ್ತರಿಸಬೇಕು ಎಂಬ ಪೋಷಕರ ಒತ್ತಾಯಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ.

ಸಾರ್ವಜನಿಕ ಶಿಕ್ಷಣ ಇಲಾಖೆ 2020–21 ನೇ ಸಾಲಿಗೆ ಪ್ರವೇಶಕ್ಕಾಗಿ ದುರ್ಬಲ ವರ್ಗಕ್ಕೆ ಸೇರಿದ ಮಕ್ಕಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಇದೇ 19 ರಂದು ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ ಮತ್ತು ಶಾಲೆಗಳಲ್ಲಿ ಲಭ್ಯವಿರುವ ಸೀಟುಗಳ ಮಾಹಿತಿ ಪ್ರಕಟವಾಗಲಿದೆ.

ಇದೇ 26 ರಿಂದ ಏಪ್ರಿಲ್ 20 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಏ. 27 ರಂದು ಲಾಟರಿ ಮೂಲಕ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಮೇ 5 ರಿಂದ ದಾಖಲಾಗಿ ಪ್ರಕ್ರಿಯೆ ಆರಂಭವಾಗಲಿದೆ.

ಕಳೆದ ಸಾಲಿನಂತೆ ಈವರ್ಷವೂ ನೆರೆಹೊರೆ ಶಾಲೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಶಾಲೆ, ಅನುದಾನಿತ ಶಾಲೆ ಮತ್ತು ಕೊನೆಯಲ್ಲಿ ಖಾಸಗಿ ಶಾಲೆಗಳ ಸೀಟು ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ. ಮೇ 21 ರಂದು ಆನ್ಲೈನ್ನಲ್ಲಿ 2 ನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದ್ದು, ಮೇ 22 ರಿಂದ 30 ರ ನಡುವೆ 2 ನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಿಗೆ ಶಾಲೆಗಳಲ್ಲಿ ದಾಖಲಾತಿ ನಡೆಯಲಿದೆ.

ಬೆಂಗಳೂರಲ್ಲಿ 2 ವಾರ್ಡ್ಗಳಲ್ಲಿ ಆರ್ಟಿಇ: ಸರ್ಕಾರದ ಹೊಸ ನಿಯಮದಿಂದಾಗಿ ಕಳೆದ ವರ್ಷದಂತೆ ಈ ವರ್ಷವೂ ಬೆಂಗಳೂರಿನ್ 198 ವಾರ್ಡ್ಗಳ ಪೈಕಿ ಎರಡು ವಾರ್ಡ್ಗಳಲ್ಲಿ ಮಾತ್ರ (ಗಿರಿನಗರ, ಗಣೇಶ ಮಂದಿರ) ಆರ್ಟಿಇ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಿಗೆ ದಾಳಲಾಗುವ ಅವಕಾಶವಿದೆ. ಉಳಿದ ಕಡೆಗಳಲ್ಲಿ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಿಗಷ್ಟೇ ಸೇರಿಸಿಕೊಳ್ಳಬೇಕಾಗುತ್ತದೆ.

ರಾಜ್ಯದ ಇತರ ಕಡೆಗಳಲ್ಲೂ ಇದೇ ಪರಿಸ್ಥಿತಿ ಇದೆ. ಈ ಮೊದಲ ಲಭ್ಯವಿದ್ದ 1.52 ಲಕ್ಷ ಆರ್ಟಿಇ ಸೀಟುಗಳ ಬದಲಿಗದೆ ಇದೀಗ ಸೀಟುಗಳ ಸಂಖ್ಯೆ 17 ಸಾವಿರಕ್ಕೆ ಕುಸಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.