7

ನಾಳೆಯಿಂದ ಪಿಯು ಪೂರಕ ಪರೀಕ್ಷೆ

Published:
Updated:

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಇದೇ 29ರಿಂದ ರಾಜ್ಯದ 301 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಚುನಾವಣೆ ಹಾಗೂ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಪ್ರಯುಕ್ತ ಜೂನ್‌ 8ಕ್ಕೆ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಸೇರಿ ಒಟ್ಟು 2.5 ಲಕ್ಷ ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಶುಕ್ರವಾರ ಮೊದಲ ದಿನ ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ ಪರೀಕ್ಷೆ ನಡೆಲಿದೆ. 

ಪರೀಕ್ಷೆ ಬೆಳಿಗ್ಗೆ 10.15ರಿಂದ 1.30ರವರೆಗೂ ನಡೆಯಲಿದೆ. ಕೆಲವು ವಿಷಯಗಳು ಮಾತ್ರ 2.30ರಿಂದ 5.45ರವರೆಗೆ ನಡೆಯಲಿವೆ. ಜುಲೈ 10ಕ್ಕೆ ಪರೀಕ್ಷೆ ಮುಕ್ತಾಯವಾಗಲಿದೆ. 

ಆನ್‌ಲೈನ್‌ ಮೂಲಕ ಪ್ರಶ್ನೆಪತ್ರಿಕೆ ರವಾನೆ: ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಹೊಸ ಕ್ರಮಕ್ಕೆ ಮುಂದಾಗಿರುವ ಪಿಯು ಮಂಡಳಿ ಆನ್‌ಲೈನ್‌ ಮೂಲಕವೇ ಪರೀಕ್ಷಾ ಕೇಂದ್ರ ರವಾನೆ ಮಾಡಲು ನಿರ್ಧರಿಸಿದೆ.

ಇದೇ ಪೂರಕ ಪರೀಕ್ಷೆಯಲ್ಲಿ ಪ್ರಾಯೋಗಿಕವಾಗಿ ಎರಡು ಕೇಂದ್ರಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಆನ್ಲೈನ್ನಲ್ಲಿ ರವಾನೆಯಾಗುವ ಪ್ರಶ್ನೆಪತ್ರಿಕೆಯನ್ನು ಪರೀಕ್ಷಾ ಮೇಲ್ವಿಚಾರಕರು ಕೇಂದ್ರದಲ್ಲಿಯೇ ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದು ವಿದ್ಯಾರ್ಥಿಗಳಿಗೆ ವಿತರಿಸಲಿದ್ದಾರೆ. ಈ ಬಾರಿ ಸಿಬಿಎಸ್‌ಇ ಪ್ರಶ್ನೆಪತ್ರಿಕೆ ಸೋರಿಕೆಯಾದಾಗ, ಮರುಪರೀಕ್ಷೆ ವೇಳೆ ಮೊದಲ ಬಾರಿಗೆ ಈ ಕ್ರಮವನ್ನು ಪರಿಚಯಿಸಿತ್ತು. 

ಮಲ್ಲೇಶ್ವರದಲ್ಲಿರುವ ಸರ್ಕಾರಿ ಬಾಲಕರ ಕಾಲೇಜು ಮತ್ತು ಎಂಇಎಸ್ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಗಳಿಗೆ ಆನ್ಲೈನ್ ಮೂಲಕ ಪ್ರಶ್ನೆಪತ್ರಿಕೆ ರವಾನಿಸಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿ ಮಲ್ಲೇಶ್ವರದಲ್ಲೇ ಇರುವುದರಿಂದ ತಾಂತ್ರಿಕ ದೋಷ ಉಂಟಾದಲ್ಲಿ ಸುಲಭವಾಗಿ ಪ್ರಶ್ನೆಪತ್ರಿಕೆ ಕಳುಹಿಸಬಹುದು ಎಂಬ ಆಲೋಚನೆಯಲ್ಲಿ ಸಮೀಪದ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !