ಮಂಗಳವಾರ, ಜನವರಿ 28, 2020
29 °C

ರಿಸರ್ವ್ ಸಬ್‌-ಇನ್ಸ್‌ಪೆಕ್ಟರ್ ನೇಮಕಾತಿ: ಲಿಖಿತ ಪರೀಕ್ಷೆ ಜ.19ಕ್ಕೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಪೊಲೀಸ್‌ ಇಲಾಖೆಯ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ರಿಸರ್ವ್ ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಜನವರಿ 12, 2020 ರಂದು ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು ದಿನಾಂಕ 19-01-2020 ರಂದು ಪರೀಕ್ಷೆ ನಡೆಸಲಾಗುವುದು.

ಜನವರಿ 19ರಂದು ಬೆಳಿಗ್ಗೆ 10-00 ಗಂಟೆಯಿಂದ 11-30 ರವರೆಗೆ ಪತ್ರಿಕೆ-1, ಮಧ್ಯಾಹ್ನ 01-00 ಗಂಟೆಯಿಂದ 02-30 ರವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ.

ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು