ಎಂಬಿಬಿಎಸ್ ಪದವಿಗೆ ಪ್ರವೇಶ: ಫೆ.8ರವರೆಗೆ ಗಡುವು ವಿಸ್ತರಣೆ

ನವದೆಹಲಿ: ಎಂಬಿಬಿಎಸ್ ಪದವಿ ಕೋರ್ಸ್‌ಗಳು ಮತ್ತು ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗಳಿಗೆ 2020–21ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಪಡೆಯುವ ಅವಧಿಯನ್ನು ಸುಪ್ರೀಂ ಕೋರ್ಟ್ ಫೆಬ್ರುವರಿ 8ರವರೆಗೂ ವಿಸ್ತರಿಸಿದೆ.
ವಿವಿಧ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಫ್. ನರಿಮನ್, ನವಿನ್ ಸಿನ್ಹಾ ಮತ್ತು ಕೆ.ಎಂ.ಜೋಸೆಫ್ ಅವರಿದ್ದ ನ್ಯಾಯಪೀಠವು ಈ ಕುರಿತು ಜವನರಿ 28ರಂದು ಆದೇಶ ಹೊರಡಿಸಿದೆ.
ಈ ಹಿಂದೆಯು ರಾಷ್ಟ್ರೀಯ ವೈದ್ಯಕೀಯ ಮಂಡಳಿಯ ಮನವಿಯನ್ನು ಪುರಸ್ಕರಿಸಿ ಪ್ರವೇಶ ಪಡೆಯುವ ಅವಧಿಯನ್ನು ಆಗಸ್ಟ್ 31ರಿಂದ ಜನವರಿ 15, 2021ರವರೆಗೂ ವಿಸ್ತರಿಸಿತ್ತು. ಕೋವಿಡ್ ಪರಿಸ್ಥಿತಿಯಿಂದಾಗಿ ಪ್ರವೇಶ ಕುರಿತ ವೇಳಾಪಟ್ಟಿಯನ್ನು ಪಾಲಿಸಲಾಗುತ್ತಿಲ್ಲ ಎಂದು ಮಂಡಳಿಯು ತಿಳಿಸಿತ್ತು.
ಆಶಿಸ್ ರಂಜನ್ ಮತ್ತು ಕೇಂದ್ರ ಸರ್ಕಾರ ನಡುವಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜನವರಿ 18, 2016ರಂದು ವೇಳಾಪಟ್ಟಿಯನ್ನು ನಿಗದಿಪಡಿಸಿದ್ದು, ಪ್ರವೇಶ ಪ್ರಕ್ರಿಯೆಯನ್ನು ಆಗಸ್ಟ್ 31ರ ಒಳಗೆ ಪೂರ್ಣಗೊಳಿಸಬೇಕು ಎಂದು ಗಡುವು ನಿಗದಿಪಡಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.