ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹20,000: SSLC, PUC, DEGREE ಓದುವವರಿಗೆ ಎಲ್‌ಐಸಿ, ಟಾಟಾದಿಂದ ವಿದ್ಯಾರ್ಥಿವೇತನ

Last Updated 17 ಡಿಸೆಂಬರ್ 2019, 10:38 IST
ಅಕ್ಷರ ಗಾತ್ರ

ವಿದ್ಯಾರ್ಥಿ ವೇತನ: ಎಲ್‌ಐಸಿ ಸುವರ್ಣ ಮಹೋತ್ಸವ ವಿದ್ಯಾರ್ಥಿ ವೇತನ– 2019

ವಿವರ: ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪೂರೈಸಲು ಹಣಕಾಸು ನೆರವು ನೀಡುವ ಸಲುವಾಗಿ ಎಲ್‌ಐಸಿ ಈ ವಿದ್ಯಾರ್ಥಿವೇತನ ನೀಡಲಿದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವಾರ್ಷಿಕ ₹ 20 ಸಾವಿರ ನೆರವು ದೊರೆಯಲಿದೆ.

ಅರ್ಹತೆ: 10 ಅಥವಾ 12ನೇ ತರಗತಿಯಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿ, ಪದವಿ ಅಥವಾ ಡಿಪ್ಲೋಮಾ ಅಥವಾ ಸಮಾನಾಂತರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರದಿಂದ ಮಾನ್ಯತೆ ಪಡೆದಿರುವ ಕಾಲೇಜು/ ಶಿಕ್ಷಣ ಸಂಸ್ಥೆಯಲ್ಲಿ ವೃತ್ತಿ ಶಿಕ್ಷಣ ಕೋರ್ಸ್‌ ಅಥವಾ ಐಟಿಐ ಕೋರ್ಸ್‌ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಮಿತಿ ₹ 1 ಲಕ್ಷ.

ಆರ್ಥಿಕ ನೆರವು: ಆಯ್ಕೆಯಾಗುವ ಸಾಮಾನ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ₹ 20 ಸಾವಿರ ಹಾಗೂ 10+2 ಕೋರ್ಸ್‌ ಅಧ್ಯಯನ ಮಾಡುತ್ತಿರುವ ಅಂಗವಿಕಲ ಬಾಲಕಿಯರಿಗೆ ವಾರ್ಷಿಕ ₹ 10 ಸಾವಿರ ಆರ್ಥಿಕ ನೆರೆವು ದೊರೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2019ರ ಡಿಸೆಂಬರ್‌ 24

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/praja/LGJ1

***

ವಿದ್ಯಾರ್ಥಿ ವೇತನ: ಟೆಕ್ನಿಪ್‌ ಇಂಡಿಯಾ ಕಂಪನಿಯ ವಿದ್ಯಾರ್ಥಿವೇತನ

ವಿವರ: ವಿಜ್ಞಾನ ವಿಷಯ ಅಧ್ಯಯನ ಮಾಡುತ್ತಿರುವ ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ನೆರವು ನೀಡಲು ಟೆಕ್ನಿಪ್‌ ಇಂಡಿಯಾ ಕಂಪನಿಯು ಈ ವಿದ್ಯಾರ್ಥಿವೇತನದ ಮೂಲಕ ಆರ್ಥಿಕ ನೆರವು ನೀಡಲಿದೆ.

ಅರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ 11ನೇ ತರಗತಿ ಅಥವಾ ಬಿ.ಟೆಕ್‌/ಬಿ.ಇ ಕೋರ್ಸ್‌ನ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಭ್ಯರ್ಥಿ ಕುಟುಂಬದ ವಾರ್ಷಿಕ ಆದಾಯ ₹ 3 ಲಕ್ಷಕ್ಕಿಂತ ಕಡಿಮೆಯಿರಬೇಕು.

ಆರ್ಥಿಕ ನೆರವು: ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೆಚ್ಚ ಭರಿಸಲು ₹ 20 ಸಾವಿರ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2019ರ ಡಿಸೆಂಬರ್‌ 25

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/praja/TILS39

***

ವಿದ್ಯಾರ್ಥಿ ವೇತನ: ಜೆ.ಎನ್‌.ಟಾಟಾ ಸ್ಮಾರಕ ವಿದ್ಯಾರ್ಥಿವೇತನ

ವಿವರ: ವಿದೇಶಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಸಾಲ ರೂಪದಲ್ಲಿ ವಿದ್ಯಾರ್ಥಿ ವೇತನ ನೀಡಲು ಜೆ.ಎನ್‌.ಟಾಟಾ ಸ್ಮಾರಕ ಸಂಸ್ಥೆಯು ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ‘ಸಾರಿಗೆ ಭತ್ಯೆ’ ಮತ್ತು ಬಹುಮಾನ ನೀಡಲಾಗುತ್ತದೆ. ಈ ಹಿಂದೆ ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುವವರು ಮತ್ತೆ ಅದೇ ಕೋರ್ಸ್‌ಗೆ ಅರ್ಜಿ ಸಲ್ಲಿಸುವಂತಿಲ್ಲ.

ಅರ್ಹತೆ: ಭಾರತದಲ್ಲಿ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ/ ಕಾಲೇಜು/ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಪೂರ್ಣಗೊಳಿಸಿರುವ ಅಥವಾ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದೇಶಗಳಲ್ಲಿ ಎರಡನೇ ವರ್ಷದ ಪದವಿ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವವರು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ ಶೇ 60ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಆರ್ಥಿಕ ನೆರವು: ₹1 ಲಕ್ಷದಿಂದ ₹10 ಲಕ್ಷದವರೆಗೆ ವಿದ್ಯಾರ್ಥಿಗಳಿಗೆ (ಒಂದು ಸಾರಿ ಮಾತ್ರ) ಸಾಲ ರೂಪದ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅದರ ಜತೆಗೆ ಸಾರಿಗೆ ಭತ್ಯೆ ಮತ್ತು ಬಹುಮಾನವೂ ದೊರೆಯುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2020ರ ಮಾರ್ಚ್‌ 9

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/praja/JNT3

ಕೃಪೆ:buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT