ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ

Last Updated 30 ಜುಲೈ 2019, 19:30 IST
ಅಕ್ಷರ ಗಾತ್ರ

ವರ್ಗ: ಮೆರಿಟ್‌ ಆಧಾರಿತ

ವಿದ್ಯಾರ್ಥಿವೇತನ: ಪಿಯರ್ಸನ್ ಮೆಪ್ರೊ ಇಂಗ್ಲಿಷ್ ಸ್ಕಾಲರ್‌ ಪ್ರೋಗ್ರಾಮ್‌– 2019

ವಿವರ: ಭಾರತೀಯ ವಿದ್ಯಾರ್ಥಿಗಳು ಮತ್ತು ವೃತ್ತಿಪರರ ಇಂಗ್ಲಿಷ್ ಓದು, ಬರವಣಿಗೆ, ಮಾತನಾಡುವ ಸಾಮರ್ಥ್ಯವನ್ನು ಸುಧಾರಿಸುವ ಮತ್ತು ಅವರ ವೃತ್ತಿಜೀವನದ ಭವಿಷ್ಯವನ್ನು ಇನ್ನಷ್ಟು ವೃದ್ಧಿಸುವ ಉದ್ದೇಶ ಇದು ಹೊಂದಿದೆ. ಇಂಗ್ಲಿಷ್ ಭಾಷಾ ಪ್ರಾವೀಣ್ಯತೆಯಲ್ಲಿ ಉನ್ನತ ಸಾಧಕರಿಗೆ ಈ ವಿದ್ಯಾರ್ಥಿವೇತನ ದೊರೆಯಲಿದೆ.

ಅರ್ಹತೆ: 18– 35 ವರ್ಷದೊಳಗಿನ ಭಾರತೀಯ ವಿದ್ಯಾರ್ಥಿಗಳು ಮತ್ತು ವೃತ್ತಿಪರರು ಹಾಗೂ 8 ಜಿಎಸ್‌ಇ ಹಂತ ದಾಟಿರುವವರು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಆರ್ಥಿಕ ನೆರವು ಮತ್ತು ಸೌಲಭ್ಯ: ಆಯ್ಕೆ ಆಗುವವರಿಗೆ ₹ 10 ಸಾವಿರ ವಿದ್ಯಾರ್ಥಿವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2019ರ ಜುಲೈ 31

Application: Apply Online

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/Praja/PMES01

***

ವರ್ಗ: ಪ್ರತಿಭೆ ಆಧಾರಿತ

ವಿದ್ಯಾರ್ಥಿವೇತನ: ‘ಬ್ರೈನರ್ಸ್’ ಪ್ರತಿಭೆ ಶೋಧ ಪರೀಕ್ಷೆ

ವಿವರ: ಬ್ರೈನರ್ಸ್ ಬ್ಯುಸಿನೆಸ್ ಸ್ಕೂಲ್, ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ರಾಷ್ಟ್ರ ಮಟ್ಟದಲ್ಲಿ ಪ್ರದರ್ಶಿಸಲು ಮತ್ತು ಅಧ್ಯಯನಕ್ಕೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ ಒದಗಿಸಿದೆ. ‘ಬ್ರೈನರ್ಸ್’ ಪ್ರತಿಭಾ ಶೋಧ ಪರೀಕ್ಷೆಯು ಒಂದು ‘ಆಪ್ಟಿಟ್ಯೂಡ್-ಕಮ್-ಸ್ಕಾಲರ್‌ಶಿಪ್’ ಪರೀಕ್ಷೆಯಾಗಿದ್ದು, 1000 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಒಟ್ಟಾರೆ
₹ 50 ಲಕ್ಷ ವಿದ್ಯಾರ್ಥಿವೇತನ ನೀಡುವ ಗುರಿಯನ್ನು ಇದು ಹೊಂದಿದೆ.

ಅರ್ಹತೆ: ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಯಲ್ಲಿ ಓದುತ್ತಿರುವ 14ರಿಂದ 25 ವರ್ಷದೊಳಗಿನ ಎಲ್ಲಾ ವಿದ್ಯಾರ್ಥಿಗಳು ಬ್ರೈನರ್ಸ್ ಪ್ರತಿಭಾ ಶೋಧ ಪರೀಕ್ಷೆಗೆ (ಬಿಟಿಎಸ್‌ಇ) ನೊಂದಾಯಿಸಿಕೊಳ್ಳಬಹುದು. ಕನಿಷ್ಠ ಶೇ 50 ಅಂಕಗಳೊಂದಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಹರು.

ಆರ್ಥಿಕ ನೆರವು ಮತ್ತು ಸೌಲಭ್ಯ: ಅಖಿಲ ಭಾರತ ಮಟ್ಟದ ಬಿಟಿಎಸ್‌ಇ ಪರೀಕ್ಷಾ ರ‍್ಯಾಂಕಿಂಗ್‌ ಆಧರಿಸಿ ₹ 2,000 ದಿಂದ ₹1,00,000 ದವರೆಗೆ ವಿದ್ಯಾರ್ಥಿ ವೇತನ ದೊರೆಯಲಿದೆ. ಆಯ್ದ ಅಭ್ಯರ್ಥಿಗಳ ಕೌಶಲ ಅಭಿವೃದ್ಧಿಗೆ ಉಚಿತ ಆನ್‌ಲೈನ್ ಕೋರ್ಸ್‌ಗಳ ನೆರವು ಸಹ ಸಿಗಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2019ರ ಆಗಸ್ಟ್ 7

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಮಾಹಿತಿಗೆ: http://www.b4s.in/Praja/BTS01

***

ವರ್ಗ: ಮೆರಿಟ್‌ ಆಧಾರಿತ

ವಿದ್ಯಾರ್ಥಿ ವೇತನ: ಟೆಲ್ ಅವಿವ್ ವಿಶ್ವವಿದ್ಯಾಲಯ ಪದವಿ ಕಾರ್ಯಕ್ರಮ– 2019. ಇಸ್ರೆಲ್‌

ವಿವರ: ಇಸ್ರೆಲ್‌ನ ಟೆಲ್‌ ಅವಿವ್‌ ವಿಶ್ವವಿದ್ಯಾಲಯವು 12ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಪಾಸಾಗಿರುವ ವಿದ್ಯಾರ್ಥಿಗಳಿಗೆ ತನ್ನ ವಿಶ್ವವಿದ್ಯಾಲಯದಲ್ಲಿ ಬಿ.ಎಸ್‌ಸಿ., ಇಲೆಕ್ಟ್ರಿಕಲ್ ಅಂಡ್‌ ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌ ಮತ್ತು ಬಿ.ಎ.– ಲಿಬರಲ್‌ ಆರ್ಟ್ಸ್‌ ಕೋರ್ಸ್‌ಗಳಿಗೆ ಪ್ರವೇಶ ನೀಡಲಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಅರ್ಹತೆ: 12ನೇ ತರಗತಿಯಲ್ಲಿ ಶೇ 75ಕ್ಕೂ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಅಥವಾ 12ನೇ ತರಗತಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಖಿಲ ಭಾರತ ಮಟ್ಟದ ಜೆಇಇ ಮುಖ್ಯ ಪರೀಕ್ಷೆಯಲ್ಲಿ 1ರಿಂದ 40 ಸಾವಿರ ರ‍್ಯಾಂಕ್‌ನೊಳಗಿರಬೇಕು. ಎಸ್‌ಎಟಿ/ಎಸಿಟಿಯಲ್ಲಿ ಉತ್ತಮ ಸಾಧನೆ ಮಾಡಿರುವವರು ಅರ್ಜಿ ಸಲ್ಲಿಸಬಹುದು.

ಆರ್ಥಿಕ ನೆರವು ಮತ್ತು ಸೌಲಭ್ಯ: ಬೋಧನಾ ಶುಲ್ಕದಲ್ಲಿ 10,000 ಡಾಲರ್‌ ರಿಯಾಯಿತಿ ದೊರೆಯಲಿದೆ.

ಕೊನೆಯ ದಿನ: 2019ರ ಆಗಸ್ಟ್‌ 31

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/Praja/TAU5

***

ಕೃಪೆ: www.buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT