ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿವೇತನ ಕೈಪಿಡಿ

Last Updated 3 ಸೆಪ್ಟೆಂಬರ್ 2019, 19:30 IST
ಅಕ್ಷರ ಗಾತ್ರ

ವರ್ಗ: ಮೆರಿಟ್‌ ಮತ್ತು ಆದಾಯ ಆಧಾರಿತ

ವಿದ್ಯಾರ್ಥಿ ವೇತನ: ಮರುಬೆನಿ ಇಂಡಿಯಾ ಪ್ರತಿಭಾನ್ವಿತರ ವಿದ್ಯಾರ್ಥಿವೇತನ–2019–20

ವಿವರ: ಮರುಬೆನೆ ಇಂಡಿಯಾ ಪ್ರೈವೆಟ್‌ ಲಿಮಿಟೆಡ್‌ (ಎಂಐಪಿಎಲ್‌) ಈ ವಿದ್ಯಾರ್ಥಿವೇತನ ಸ್ಥಾಪಿಸಿದೆ. ಉನ್ನತ ಶಿಕ್ಷಣ ಕೈಗೊಳ್ಳುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶವನ್ನು ಇದು ಹೊಂದಿದೆ. ದೇಶದಾದ್ಯಂತ ಅರ್ಹ ವಿದ್ಯಾರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಬಹುದು.

ಅರ್ಹತೆ: 12ನೇ ತರಗತಿಯಲ್ಲಿ (2018-19) ಶೇ 75ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು.ಯಾವುದೇ ರಾಜ್ಯ / ಯುಜಿಸಿ ಮಾನ್ಯತೆ ಪಡೆದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪೂರ್ಣ ಕಾಲಿಕ ಪದವಿ ಕೋರ್ಸ್‌ ಪ್ರವೇಶ ಪಡೆದಿರುವ ಭಾರತೀಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯದ ಮಿತಿ ₹ 4 ಲಕ್ಷ.

ಆರ್ಥಿಕ ನೆರವು: ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಒಮ್ಮೆಗೆ ₹ 40 ಸಾವಿರದಿಂದ ₹ 50 ಸಾವಿರದವರೆಗೆ ವಿದ್ಯಾರ್ಥಿ ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2019ರ ಸೆಪ್ಟೆಂಬರ್‌ 25

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/praja/MIM5

***

ವರ್ಗ: ಮೆರಿಟ್‌ ಮತ್ತು ಆದಾಯ ಆಧಾರಿತ

ವಿದ್ಯಾರ್ಥಿ ವೇತನ: ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗಾಗಿ ಬೇಗಂ ಹಜರತ್‌ ಮಹಲ್‌ ರಾಷ್ಟ್ರೀಯ ವಿದ್ಯಾರ್ಥಿ ವೇತನ ಯೋಜನೆ– 2019–20

ವಿವರಣೆ:ಮೌಲಾನಾ ಆಜಾದ್ ಶಿಕ್ಷಣ ಪ್ರತಿಷ್ಠಾನವು (ಎಂಎಇಎಫ್‌)ಅಲ್ಪಸಂಖ್ಯಾತ ಸಮುದಾಯಗಳ ಬಡ, ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಶಿಕ್ಷಣ ಮುಂದುವರೆಸಲು ಈ ವಿದ್ಯಾರ್ಥಿವೇತನ ಸ್ಥಾಪಿಸಿದೆ.

ಅರ್ಹತೆ: 9ರಿಂದ 12ನೇ ತರಗತಿಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ಹಿಂದಿನ ವಾರ್ಷಿಕ ಪರೀಕ್ಷೆಯಲ್ಲಿ ಶೇ 50ಕ್ಕೂ ಹೆಚ್ಚು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಲ್ಲದೆ ಅವರ ಕುಟುಂಬದ ವಾರ್ಷಿಕ ಆದಾಯ ₹ 2 ಲಕ್ಷದೊಳಗಿರಬೇಕು.

ಆರ್ಥಿಕ ನೆರೆವು: ಆಯ್ಕೆಯಾಗುವ 9ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ₹ 5,000 ಹಾಗೂ 11 ಮತ್ತು 12ನೇ ತರಗತಿ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ₹ 6,000 ವಿದ್ಯಾರ್ಥಿವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2019ರ ಸೆಪ್ಟೆಂಬರ್‌ 30

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಮೂಲಕ

ಮಾಹಿತಿಗೆ: http://www.b4s.in/praja/MAN1

***

ಕೃಪೆ: www.buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT